ದೇವನಹಳ್ಳಿ ಸಾರಿಗೆ ಕಚೇರಿಯಲ್ಲಿ ಸುರಕ್ಷಾ ಸಪ್ತಾಹಕ್ಕೆ ಚಾಲನೆ
ದೇವನಹಳ್ಳಿ: ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆ ಹಾಗೂ ಇಲ್ಲಿನ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು 25ನೇ ರಾಷ್ಟ್ರೀಯ ಸುರಕ್ಷಾ ಸಪ್ತಾಹ ಅಂಗವಾಗಿ ವಾಹನ ಚಾಲಕರಿಗೆ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಸಭೆಯನ್ನು ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್. ಭೀಮಪ್ಪ ವಹಿಸಿ ಯಾವುದೇ ವ್ಯಕ್ತಿ ವಾಹನಗಳನ್ನು ಚಲಾಯಿಸುವುದು ಮುಖ್ಯವಲ್ಲ.
ಎಲ್ಲಕ್ಕಿಂತ ಮೊದಲು ವಾಹನ ಚಾಲನೆ ಲೈಸನ್ಸ್ ಪಡೆದಿರಬೇಕು. ಜೊತೆಗೆ ವಾಹನಕ್ಕೆ ಸಂಬಂಧಪಟ್ಟ ಚಾಲ್ತಿಯಲ್ಲಿರುವ ಎಲ್ಲ ದಾಖಲೆಗಳನ್ನು ಇಟ್ಟುಕೊಂಡಿರಬೇಕು ಮತ್ತು ಸಂಚಾರ ನಿಯಮಗಳನ್ನು ಪಾಲಿಸಬೇಕು. ನಿಮ್ಮ ವಾಹನ ಚಾಲನೆಯಿಂದ ಇನ್ನೊಬ್ಬ ಚಾಲಕರಿಗೆ ಅಥವಾ ಪಾದಚಾರಿಗಳಿಗೆ ತೊಂದರೆಯುಂಟಾಗಬಾರದು ಎಂದರು.
ವಾಹನ ಚಾಲನೆ ಸಂದರ್ಭದಲ್ಲಿ ಅಜಾಗರೂಕತೆಯಿಂದ ವಾಹನ ಚಲಾಯಿಸಿದರೆ ಅಮಾಯಕ ಜನರ ಪ್ರಾಣಹಾನಿಯಾಗುತ್ತದೆ. ಆದ್ದರಿಂದ ವಾಹನ ವೇಗಮಿತಿಯಲ್ಲಿರಲಿ ಎಂದು ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಸಿ.ಬಿ. ಪಾಟೀಲ್ ತಿಳಿಸಿದರು.
ಇದೇ ಸಂಧರ್ಭದಲ್ಲಿ ರಸ್ತೆ ಸುರಕ್ಷಾ ಸಪ್ತಾಹಕ್ಕೆ ಸಂಬಂಧಪಟ್ಟ ಕರಪತ್ರಗಳನ್ನು ಅಧಿಕಾರಿ ಭೀಮಪ್ಪ ಬಿಡುಗಡೆ ಮಾಡಿದರು. ಹಿರಿಯ ಮೋಟಾರು ವಾಹನ ನಿರೀಕ್ಷಕ ಎಸ್.ಮಂಜುನಾಥ್ ಹಾಗೂ ಅಧೀಕ್ಷಕ ಗಂಗಯ್ಯ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

