ಬೆಂಗಳೂರು ಗ್ರಾಮಾಂತರ

ರಾಷ್ಟ್ರೀಯ ಮಾನವ ಹಕ್ಕು ಪರಿಷತ್ನ ತರಬೇತಿ

Published On :

ಮಾಗಡಿ: ಮಾನವ ಹಕ್ಕು ಆಯೋಗಕ್ಕೆ ಅಧ್ಯಕ್ಷರಿಲ್ಲ ಎಂಬ ಕಾರಣಕ್ಕಾಗಿಯೇ ಆಯೋಗವು ದುರ್ಬಲವೆಂದು ಕಡೆಗಣಿಸುವುದು ಸರಿಯಾದ ಕ್ರಮವಲ್ಲ ಎಂದು ಮಾನವ ಹಕ್ಕು ಆಯೋಗದ ಸದಸ್ಯ ನಿವೃತ್ತ ನ್ಯಾಯಾಧೀಶ  ಚಂದ್ರಶೇಖರ್ ಹುನಗುಂದ ತಿಳಿಸಿದರು.
 ಅವರು ತಾವರೆಕೆರೆ ಹೋಬಳಿ ಚನ್ನೇನಹಳ್ಳಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕು ಪರಿಷತ್ನ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಆಯೋಗಕ್ಕೆ ಅಧ್ಯಕ್ಷರಿಲ್ಲವೆಂದು ಆಯೋಗವು ಸುಮ್ಮನೆ ಕುಳಿತ್ತಿಲ್ಲ, ಸಕ್ರಿಯಾವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ ಎಂದರು.
 ವಕೀಲರಾದ ಪ್ರಮೀಳಾ ನೇಸರ್ಗಿ, ರಾಷ್ಟ್ರೀಯ ಮಾನವ ಹಕ್ಕು ಪರಿಷತ್ನ ರಾಷ್ಟ್ರಾಧ್ಯಕ್ಷ ಡಾ.ಬಿ.ಜೆ.ಎಂ. ರೆಡ್ಡಿ ಮಾತನಾಡಿದರು.
  ಇದೇ ಸಂದರ್ಭದಲ್ಲಿ ಮಾನವ ಹಕ್ಕುಗಳ  ಕೈಪಿಡಿಯನ್ನು ರಾಬರ್ಟ್ ಡಿ ಸೋಜಾ, ನಿವೃತ್ತ ನ್ಯಾಯಾಧೀಶ ಚಂದ್ರಶೇಖರ್ ಹುನಗುಂದ ಲೋಕಾರ್ಪಣೆ ಮಾಡಿದರು.
 ರಶೀ, ಓಜಾ, ಸುಶೀಲಮ್ಮ, ಕೋದಂಡರಾಮ, ಸತ್ಯನಾರಾಯಣ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.