ಕೊಳ್ಳಿಗನಹಳ್ಳಿ ಗ್ರಾಪಂಗೆ ಬೀಗ ಜಡಿದ ಗ್ರಾಮಸ್ಥರು
ರಾಮನಗರ: ಶೌಚಾಲಯ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಸರ್ಕಾರದ ಪ್ರೋತ್ಸಾಹ ಧನ ನೀಡಿಕೆಯಲ್ಲಿ ತಾರತಮ್ಯ, ಅಧಿಕಾರಿಗಳಿಂದ ಹಣ ದುರ್ಬಳಕೆ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಸಾರ್ವಜನಿಕರು ಕನಕಪುರ ತಾಲೂಕಿನ ಕೊಳ್ಳಿಗನಹಳ್ಳಿಯಲ್ಲಿ ಬುಧವಾರ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ. ಗ್ರಾ.ಪಂ. ಕಚೇರಿಗೆ ಬೀಗ ಜಡಿದ ಪ್ರತಿಭಟನಾಕಾರರು ಅಧ್ಯಕ್ಷ, ಸದಸ್ಯರು, ಪಿಡಿಒ, ಕಾರ್ಯದರ್ಶಿ ಮತ್ತು ತಾ.ಪಂ. ಇಒ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಚುನಾಯಿತ ಪ್ರತಿನಿಧಿಗಳು, ಪಿಡಿಒ ಕಚೇರಿಯತ್ತ ಸುಳಿಯಲಿಲ್ಲ.
ಸರ್ಕಾರವು ಉದ್ಯೋಗ ಖಾತ್ರಿ ಯೋಜನೆಯಡಿ ದನದ ಕೊಟ್ಟಿಗೆ, ಶೌಚಾಲಯ, ಕೋಳಿ ಸಾಕಾಣಿಕೆ ಶೆಡ್, ಕೃಷಿ ಕಾಮಗಾರಿಗಳು ಸಹಿತ ವಯಕ್ತಿಕ ಸೌಲಭ್ಯ ಹೊಂದಲು ಅವಕಾಶ ನೀಡಿದೆಯಾದರೂ ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಯೋಜನೆಯನ್ನು ಹಳ್ಳ ಹಿಡಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ವೈಯಕ್ತಿಕ ಫಲಾನುಭವಿಗಳು 3 ಹಂತದಲ್ಲಿ ಒದಗಿಸುವ ಫೋಟೋಗಳನ್ನು ಸ್ವೀಕರಿಸಲು ಅಧಿಕಾರಿಗಳು ಒಪ್ಪುತ್ತಿಲ್ಲ. ಸ್ವತಃ ತಾವೇ ಫೋಟೋ ತೆಗೆದು, ಕಾಮಗಾರಿ ದಣಢೀಕರಿಸಬೇಕೆಂದು ಅಧಿಕಾರಿಗಳು ತಗಾದೆ ತೆಗೆಯುತ್ತಿದ್ದಾರೆ ಎಂದು ದೂರಿದರು. ಗ್ರಾ.ಪಂ.ನಲ್ಲಿ ಅನುದಾನಗಳು ಮತ್ತು ಯೋಜನೆಗಳು ಕೆಲವೇ ಅನುಕೂಲಸ್ಥರಿಗೆ ಸೀಮಿತವಾಗಿವೆ. ಅರ್ಹ ಫಲಾನುಭವಿಗಳನ್ನು ಗುರ್ತಿಸಿ, ಸೌಲಭ್ಯ ಒದಗಿಸಲಾಗುತ್ತಿಲ್ಲ. ಸವಲತ್ತುಗಳ ಬಗ್ಗೆ ಅಗತ್ಯ ಪ್ರಚಾರವನ್ನೂ ನೀಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಗ್ರಾಮ ಪಂಚಾಯಿತಿಯಲ್ಲಿ ಅನುದಾನಗಳು ದುರ್ಬಳಕೆ ಆಗಿವೆ. ಗ್ರಾಮೀಣಾಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮೇಲಧಿಕಾರಿಗಳೂ ಗಮನ ಹರಿಸುತ್ತಿಲ್ಲ ಎಂದು ಅವರು ಕಿಡಿ ಕಾರಿದರು.
ಗಾಳಿ ತೆಗೆದರು: ಪ್ರತಿಭಟನೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ ಕನಕಪುರ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜೆ.ಜೆ.ನಾಯಕ್ ಅವರ ಜೀಪಿನ ಚಕ್ರದಿಂದ ಗಾಳಿ ತೆಗೆದು ಗ್ರಾಮಸ್ಥರು, ಗ್ರಾ.ಪಂ. ಕಟ್ಟದ ಗಾಜು ಒಡೆದು ಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

