ಬೆಂಗಳೂರು ಗ್ರಾಮಾಂತರ

ವಿದ್ಯಾರ್ಥಿಗಳ ಪ್ರತಿಭಟನೆ

Published On :

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರಗಳ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೊಸದಾಗಿ ಅಳವಡಿಸಿರುವ ಸೆಮಿಸ್ಟರ್ ಪದ್ಧತಿಯನ್ನು ಸರ್ಕಾರ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಬುಧವಾರ ಇಲ್ಲಿನ ವಿಜಯಪುರ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕೇಂದ್ರದಿಂದ ಸುಮಾರು ಮೂರು ಕಿಮೀ ದೂರದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಐಟಿಐ ವಿದ್ಯಾರ್ಥಿಗಳಿಗೆ ಎರಡು ವರ್ಷಗಳಿಗೊಮ್ಮೆ ಪರೀಕ್ಷೆಗಳನ್ನು ನಡೆಸುತ್ತಿತ್ತು. ಆದರೆ ಸೆಮಿಸ್ಟರ್ ಪದ್ಧತಿ ಅಳವಡಿಸಿರುವುದರಿಂದ ಅನೇಕ ಬಡ ವಿದ್ಯಾರ್ಥಿಗಳು ಅರ್ಧದಲ್ಲೇ ತರಬೇತಿ ನಿಲ್ಲಿಸಬೇಕಾಗುತ್ತದೆ. ಹಿಂದಿನಂತೆ ಎರಡು ವರ್ಷಗಳಿಗೊಮ್ಮೆ ಪರೀಕ್ಷೆ ನಡೆಯುವಂತಾಗಲಿ ಎಂದು ತಿಳಿಸಿದ್ದಾರೆ. ಪ್ರತಿಭಟನಾ ಮೆರವಣಿಗೆಯಲ್ಲಿ ದೇವನಹಳ್ಳಿ ತಾಲೂಕಿನ ಪ್ರಗತಿ, ಬನಶಂಕರಿ, ಶ್ರೀ ಕೃಷ್ಣ ಐಟಿಐ, ಯಲಹಂಕದ ಭುವನ್ ಐಟಿಐ, ದೊಡ್ಡಬಳ್ಳಾಪುರದ ಜಾಲಪ್ಪ ಮತ್ತು ಅರವಿಂದ ಐಟಿಐ, ರಾಜಾನುಕುಂಟೆಯ ಬಿಲ್ವ ಹಾಗೂ ಚಿಕ್ಕಬಳ್ಳಾಪುರದ ಶುಭೋದಯ ಐಟಿಐ ಸಂಸ್ಥೆಗಳ ಸುಮಾರು ಎಂಟು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರಲ್ಲದೆ ವಿದ್ಯಾರ್ಥಿ ಮುಖಂಡರು ತಹಸೀಲ್ದಾರ್ರಿಗೆ ಮನವಿ ಸಲ್ಲಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.