ಜನವಿರೋಧಿ ಧೋರಣೆ ಖಂಡಿಸಿ ಪ್ರತಿಭಟನೆ
ದೊಡ್ಡಬಳ್ಳಾಪುರ: ತಾಲೂಕು ಕಚೇರಿಯಲ್ಲಿ ಜನಸಾಮಾನ್ಯರ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ. ತಹಶೀಲ್ದಾರರೂ ಸೇರಿದಂತೆ ಅನೇಕ ಅಧಿಕಾರಿಗಳು ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಪ್ರಜಾ ವಿಮೋಚನಾ ಚಳವಳಿ ಆಗ್ರಹಿಸಿದೆ.
ಇಲ್ಲಿನ ತಾಲೂಕು ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದ ಸಂಘಟನೆಯ ಮುಖಂಡರು, ದೇಶದಲ್ಲಿ ದಲಿತರನ್ನು ಶೋಷಿಸುವ ವ್ಯವಸ್ಥೆ ಬದಲಾಗಿಲ್ಲ. ದೊಡ್ಡಬಳ್ಳಾಪುರ ತಹಶೀಲ್ದಾರರು ದಲಿತ ವಿರೋಧಿ ವರ್ತನೆ ತೋರಿದ್ದಾರೆ. ಜಿಲ್ಲಾಧಿಕಾರಿಗಳ ಮಾತಿಗೂ ಇವರಲ್ಲಿ ಕಿಮ್ಮತ್ತಿಲ್ಲ. ಶೋಷಿತರ ಕನಿಷ್ಠ ಬೇಡಿಕೆಗಳಿಗೆ ಸ್ಪಂದಿಸುವ ಸೌಜನ್ಯವೂ ಇಲ್ಲ. ತಾಲೂಕಿನಲ್ಲಿರುವ ರೈತರ, ಬಡವರ, ಮಹಿಳೆಯರ ಸಂವಿಧಾನಿಕ ಹಕ್ಕುಗಳು ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಹೀಗಾಗಿ ಕೂಡಲೇ ಇವರನ್ನು ತಾಲೂಕಿನಿಂದ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರಜಾ ವಿಮೋಚನಾ ಚಳವಳಿ(ಸಮತಾವಾದ)ದ ಜಿಲ್ಲಾ ಮತ್ತು ತಾಲೂಕು ಸಮಿತಿಗಳ ಮುಖಂಡರು, ಮಹಿಳಾ ಘಟಕ, ನಗರ ಘಟಕ, ಗೂಳ್ಯ, ಮಾಚಗೊಂಡನಹಳ್ಳಿ, ಊದನಹಳ್ಳಿ, ಆದಿನಾರಾಯಣಹೊಸಹಳ್ಳಿ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

