ರೇಯಾನ್ ಕಾರ್ಖಾನೆ ವಿರುದ್ಧ ಪ್ರತಿಭಟನೆ
ದೊಡ್ಡಬಳ್ಳಾಪುರಛ ಕಳೆದ ಕೆಲ ದಿನಗಳಿಂದ ಬಸ್ ವ್ಯವಸ್ಥೆ ಸ್ಥಗಿತಗೊಳಿಸಿರುವ ಇಲ್ಲಿನ ಕೈಗಾರಿಕಾ ಪ್ರದೇಶದ ಬಾಂಬೆ ರೇಯಾನ್ ಗಾರ್ಮೆಂಟ್ಸ್ನ ಆಡಳಿತ ಮಂಡಲಿ ಧೋರಣೆ ವಿರುದ್ಧ ಮಹಿಳಾ ಕಾರ್ಮಿಕರು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಇತ್ತೀಚೆಗಷ್ಟೇ ಮಹಿಳಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಗಾರ್ಮೆಂಟ್ಸ್ನ ಬಸ್ ಅಪಘಾತಕ್ಕೀಡಾಗಿತ್ತು. ಇದೇ ನೆಪ ಮಾಡಿ ಆಡಳಿತ ಮಂಡಲಿ ಬಸ್ ವ್ಯವಸ್ಥೆಯನ್ನೇ ಸ್ಥಗಿತಗೊಳಿಸಿತ್ತು. ಹೀಗಾಗಿ ದೂರದ ಚಿಕ್ಕಬಳ್ಳಾಪುರ ಸೇರಿದಂತೆ ಕೆಲ ಭಾಗಗಳಿಂದ ಬರುತ್ತಿದ್ದ ಮಹಿಳಾ ಕಾರ್ಮಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರಲಾಗುತ್ತಿರಲಿಲ್ಲ. ಪ್ರಶ್ನಿಸಿದರೆ ಆಡಳಿತ ಮಂಡಲಿ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಉತ್ತರಗಳೇ ಕೇಳಿ ಬರುತ್ತಿದ್ದವು. ಅಲ್ಲದೆ ಕಾರ್ಮಿಕರ ಅನೇಕ ಸವಲತ್ತುಗಳನ್ನೂ ವಂಚಿಸಲಾಗಿದೆ. ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಕಾರ್ಖಾನೆ ಜವಾಬ್ದಾರಿ ಎಂದು ಆಗ್ರಹಿಸಲಾಯಿತು.
ಸ್ಥಳಕ್ಕೆ ಬಂದ ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕಿ ನಿರ್ಮಲ, ಕಾರ್ಮಿಕರ ಸಮಸ್ಯೆಗಳು ಅರಿವಿಗೆ ಬಂದಿದೆ. ಸುಸ್ಥಿತಿಯಲ್ಲಿರುವ ಬಸ್ಸುಗಳನ್ನು ನೀಡುವುದಲ್ಲದೆ 15 ದಿನಗಳ ಒಳಗೆ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. 1 ತಿಂಗಳೊಳಗೆ ಫಿಎಫ್ ಹಣ ನೀಡಲು ವ್ಯವಸ್ಥೆ ಮಾಡಲಾಗುವುದು. ಮಹಿಳಾ ಕಾರ್ಮಿಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

