ಎಸಿ ಕಚೇರಿ ಸ್ಥಳಾಂತರ ಆದೇಶ; ಪ್ರತಿಭಟನೆ ಸ್ಥಗಿತ
ದೊಡ್ಡಬಳ್ಳಾಪುರ: ಉಪವಿಭಾಗಾಧಿಕಾರಿಗಳ ಕಚೇರಿ ಸ್ಥಳಾಂತರ ಅಧಿಕೃತ ಆದೇಶ ಕೈಸೇರಿರುವ ಹಿನ್ನಲೆಯಲ್ಲಿ ಮತ್ತು ಹೋರಾಟಕ್ಕೆ ಜಯ ಸಂದಿರುವ ಸಂಭ್ರಮದಲ್ಲಿ ಗಣರಾಜ್ಯೋತ್ಸವದಂದು ನಡೆಸಲು ಉದ್ದೇಶಿಸಲಾಗಿದ್ದ ಗಂಭೀರ ಸ್ವರೂಪದ ಪ್ರತಿಭಟನೆ ಕೈಬಿಡಲಾಗಿದೆ ಎಂದು ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಹೇಳಿದೆ.ಈ ಮುನ್ನ ನಡೆದಿದ್ದ ಸಭೆಯಲ್ಲಿ ಜ.24ರೊಳಗೆ ಕಚೇರಿ ಸ್ಥಳಾಂತರ ಆದೇಶ ಬಾರದಿದ್ದಲ್ಲಿ ಗಣರಾಜ್ಯೋತ್ಸವದಲ್ಲಿ ಉಪ ವಿಭಾಗಾಧಿಕಾರಿಗಳಿಂದ ಧ್ವಜಾರೋಹಣ ಮಾಡಿಸಲು ಅಡ್ಡಿ ಉಂಟು ಮಾಡುವ ಮತ್ತು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸುವ, ಜನಪ್ರತಿನಿಧಿಗಳಾದಿಯಾಗಿ ಎಲ್ಲರೂ ಕಾರ್ಯಕ್ರಮ ಬಹಿಷ್ಕರಿಸುವ ಎಚ್ಚರಿಕೆ ನೀಡಲಾಗಿತ್ತು. ಆದರೆ ಸರ್ಕಾರ ಸಕಾರಾತ್ಮಕ ಸ್ಪಂದನೆ ನೀಡಿರುವುದರಿಂದ ಹೋರಾಟ ಕೈಬಿಡಲಾಗಿದೆ. ಜ.26ರ ಭಾನುವಾರ ಬೆಳಗ್ಗೆ 10 ಗಂಟೆಗೆ ಕನ್ನಡ ಜಾಗೃತ ಭವನದಲ್ಲಿ ಸಮಿತಿ ಸಭೆ ನಡೆಯಲಿದೆ.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಗಣರಾಜ್ಯೋತ್ಸವ
ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನೇತೃತ್ವದಲ್ಲಿ ಗಣರಾಜ್ಯೋತ್ಸವ ಸಮಾರಂಭ ಇಲ್ಲಿನ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಜ.26ರ ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಉಪ ವಿಭಾಗಾಧಿಕಾರಿ ಸಿ.ಮಂಜುನಾಥ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಸಚಿವ ವೀರಪ್ಪಮೊಯ್ಲಿ, ವಿಧಾನಪರಿಷತ್ ಸದಸ್ಯ ರಾಮಚಂದ್ರಗೌಡ, ಇ.ಕೃಷ್ಣಪ್ಪ, ಪುಟ್ಟಣ್ಣ, ಜಿ.ಪಂ ಉಪಾಧ್ಯಕ್ಷ ಹನುಮಂತೇಗೌಡ, ತಾಪಂ ಅಧ್ಯಕ್ಷ ನರಸಮ್ಮ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಿವರಾಜ್ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳು, ಎನ್ಎಸ್ಎಸ್, ಭಾರತ ಸೇವಾದಳ ಮತ್ತು ಪೊಲೀಸರಿಂದ ಆಕರ್ಷಕ ಪೆರೇಡ್ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

