ವಿವಿಧ ಇಲಾಖೆಗಳ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ವಿವಿಧ ಅನುದಾನಗಳ ಅಡಿಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಮಾರಂಭ ಜ.26ರ ಭಾನುವಾರ ಬೆಳಗ್ಗೆ 8.30ಕ್ಕೆ ನಡೆಯಲಿದೆ.
ಇಲ್ಲಿನ ಲೋಕೋಪಯೋಗಿ ಇಲಾಖೆ ವತಿಯಿಂದ ಪ್ರವಾಸಿ ಮಂದಿರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ನೆಲಮಂಗಲ-ಚಿಕ್ಕಬಳ್ಳಾಪುರ ಸಂಪರ್ಕ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುವುದು. ಅದೇ ರೀತಿ ನಗರಸಭೆ ವ್ಯಾಪ್ತಿಯಲ್ಲಿ ಗಂಡು ಮಕ್ಕಳ ವಿದ್ಯಾರ್ಥಿ ನಿಲಯ, ಹೆಣ್ಣು ಮಕ್ಕಳ ವಿದ್ಯಾರ್ಥಿ ನಿಲಯ, ಬಾಶೆಟ್ಟಿಹಳ್ಳಿ, ಕರೇನಹಳ್ಳಿಗಳಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣ, ಮಲ್ಲಾತಹಳ್ಳಿಯಲ್ಲಿ ಸಮುದಾಯ ಭವನ ನಿರ್ಮಾಣ, ದೊಡ್ಡಬಳ್ಳಾಪುರ ನಗರದ ಅನಕೃ ರಸ್ತೆ ಮತ್ತು ಕೊಂಗಾಡಿಯಪ್ಪ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿ, ಕುರುಬರಹಳ್ಳಿಯಲ್ಲಿ ಆಶ್ರಯ ಬಡಾವಣೆಯ ಕೊಳವೆ ಬಾವಿ ಶಂಕುಸ್ಥಾಪನೆ ಯೋಜನೆಯ ಹಲವು ಕಾಮಗಾರಿಗಳಿಗೆ ಶಾಸಕ ವೆಂಕಟರಮಣಯ್ಯ ಚಾಲನೆ ನೀಡಲಿದ್ದಾರೆ.
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ,
ಚಾಲನೆ ವೇಳೆ ಎಚ್ಚರ ವಹಿಸಲು ಕರೆ
ರಾಮನಗರ: ಹೆಚ್ಚಿರುವ ವಾಹನ ದಟ್ಟಣೆ, ಚಾಲಕರ ಅಜಾಗರೂಕತೆಯ ಪರಿಣಾಮ ಅಪಘಾತಗಳೂ ಹೆಚ್ಚಿವೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಚಾಲನೆ ವೇಳೆ ಚಾಲಕರು ಎಚ್ಚರ ವಹಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಹಬೀಬ್ವುಲ್ಲಾ ಖಾನ್ ಕಿವಿಮಾತು ಹೇಳಿದರು. ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಿಲ್ಲಾಡಳಿತ, ಸಾರಿಗೆ ಮತ್ತು ಪೊಲೀಸ್ ಇಲಾಖೆಯಿಂದ ನಗರದಲ್ಲಿ ಶನಿವಾರ ನಡೆದ ರಸ್ತೆ ಸುರಕ್ಷತೆ ಕುರಿತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅತಿ ವೇಗವೂ ಅಪಘಾತಕ್ಕೆ ಪ್ರಮುಖ ಕಾರಣ. ಈ ಬಗ್ಗೆಯೂ ಎಚ್ಚರ ವಹಿಸಬೇಕು ಎಂದರು. ಸರ್ಕಾರಿ ಜ್ಯೂನಿಯರ್ ಕಾಲೇಜು ಆವರಣದಿಂದ ಐಜೂರು ವೃತ್ತದವರೆಗೆ ಜಾಥಾ ನಡೆಯಿತು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಾಶ್ಬಾಬು, ಅಧಿಕಾರಿಗಳಾದ ಶ್ರೀನಾಥ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

