ಬೆಂಗಳೂರು ಗ್ರಾಮಾಂತರ

ಜಿಲ್ಲಾಡಳಿತದ ಗಣರಾಜ್ಯೋತ್ಸವ ಡಿಕೆಶಿಯಿಂದ ಧ್ವಜಾರೋಹಣ

Published On :

ರಾಮನಗರ: ಜಿಲ್ಲಾಡಳಿತದಿಂದ ಜ.26ರ ಬೆಳಗ್ಗೆ 9ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ 65ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಧ್ವಜಾರೋಹಣ ನೆರವೇರಿಸಲಿದ್ದಾರೆ.   
ಮಾಜಿ ಮುಖ್ಯಮಂತ್ರಿ, ಸ್ಥಳೀಯ ಶಾಸಕ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸುವರು. ಸಂಸದ ಡಿ.ಕೆ.ಸುರೇಶ್, ಶಾಸಕರಾದ ಸಿ.ಪಿ.ಯೋಗೇಶ್ವರ್, ಎಚ್.ಸಿ.
ಬಾಲಕೃಷ್ಣ, ವಿಧಾನಪರಿಷತ್ ಸದಸ್ಯರು, ಜಿಪಂ ಅಧ್ಯಕ್ಷ ಎಚ್.ಸಿ.ರಾಜು, ತಾಪಂ ಅಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸಹಿತ ಜನಪ್ರತಿನಿಧಿಗಳು ಭಾಗವಹಿಸುವರು.  ಆಕರ್ಷಕ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಜಿಲ್ಲೆಯವರೇ ಆದ ಶಿವಕುಮಾರ್ ಧ್ವಜಾರೋಹಣ ನೆರವೇರಿಸುತ್ತಿರುವುದು ವಿಶೇಷ.  


ಕೆಂಗಲ್ ತೋಟಗಾರಿಕೆ ಫಾರಂನಲ್ಲಿ
ಇಂದಿನಿಂದ ಫಲಪುಷ್ಪ ಪ್ರದರ್ಶನ



ರಾಮನಗರ: ಜಿಲ್ಲಾಡಳಿತ, ಜಿಪಂ, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘದಿಂದ ಚನ್ನಪಟ್ಟಣದ ಕೆಂಗಲ್ ತೋಟಗಾರಿಕೆ ಫಾರಂನಲ್ಲಿ ಆಯೋಜಿಸಿರುವ 3ನೇ ವರ್ಷದ ಫಲಪುಷ್ಪ ಪ್ರದರ್ಶನಕ್ಕೆ ಜ.26ರಂದು ಚಾಲನೆ ನೀಡಲಾಗುವುದು.   3 ದಿನ ನಡೆಯುವ ಈ ಪ್ರದರ್ಶನದಲ್ಲಿ ಮಳಿಗೆಗಳನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸುವರು. ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಚಾಲನೆ ನೀಡುವರು. ತೋಟಗಾರಿಕೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಡಾ.ಶಾಮನೂರು ಶಿವಶಂಕರಪ್ಪ ತೋಟಗಾರಿಕೆ ಬೆಳೆಗಳ ಮಾಹಿತಿ ಕೈಪಿ ಬಿಡುಗಡೆ ಮಾಡುವರು. ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಅಧ್ಯಕ್ಷತೆ ವಹಿಸುವರು. ಸಂಸದ ಡಿ.ಕೆ.ಸುರೇಶ್, ಶಾಸಕರಾದ ಎಚ್.ಸಿ.ಬಾಲಕೃಷ್ಣ, ಕೆ.ಶ್ರೀನಿವಾಸಮೂರ್ತಿ, ರಾಮಚಂದ್ರಗೌಡ, ಎಂ.ವಿ.ರಾಜಶೇಖರನ್, ಪುಟ್ಟಣ್ಣ, ಇ.ಕೃಷ್ಣಪ್ಪ, ಸೈಯದ್ ಮುದೀರ್ ಆಗಾ ಭಾಗವಹಿಸುವರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.