ಬೆಂಗಳೂರು ಗ್ರಾಮಾಂತರ

ಜಿಲ್ಲಾ ಕೇಂದ್ರ ಘೋಷಣೆ ವಿಳಂಬ, 28 ರಂದು ದೇವನಹಳ್ಳಿ ಬಂದ್

Published On :

ದೇವನಹಳ್ಳಿ: ರಾಜ್ಯ ಸರ್ಕಾರ ದೇವನಹಳ್ಳಿ ಜಿಲ್ಲಾ ಕೇಂದ್ರ ಘೋಷಣೆ ಬಗ್ಗೆ ವಿಳಂಬ ಮಾಡುತ್ತಿರುವುದರಿಂದ ದೇವನಹಳ್ಳಿ ಬಂದ್ಗೆ ಜಿಲ್ಲಾ ಹೋರಾಟ ಸಮಿತಿಯವರು ಕರೆ ನೀಡಿದ್ದಾರೆ.
ಈ ಬಂದ್ ಆಚರಣೆ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳು, ಮಾಜಿ ಶಾಸಕರು ಅಲ್ಲದೆ ತಾಲೂಕಿನ ಎಲ್ಲ ಸಂಘ ಸಂಸ್ಥೆಗಳು, ತಾಲೂಕು ವಕೀಲರ ಸಂಘ, ಖಾಸಗೀ ಶಿಕ್ಷಣ ಸಂಸ್ಥೆಗಳು ಸಹಕಾರ ನೀಡಲಿವೆ ಎಂದು ಜಿಲ್ಲಾ ಹೋರಾಟ ಸಮಿತಿ ಮುಖ್ಯ ಸಂಚಾಲಕ ಬಿ.ಕೆ ಶಿವಪ್ಪ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.  
ಹೊಸಕೋಟೆ ತಾಲೂಕಿನ ಹಿರಿಯರು ಹಾಗೂ ಮಾಜಿ ಶಾಸಕ ಸೂ.ರಂ.ರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜ.28ರಂದು ನಡೆಯುವ ಬಂದ್ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಸಿ.ಜಗನ್ನಾಥ್, ಎಸ್.ಆರ್.ರವಿಕುಮಾರ್, ನರಸಿಂಹನಾಯಕ್, ಬಿಜೆಪಿ ತಾಲೂಕು ಅಧ್ಯಕ್ಷ ರಾಜಗೋಪಾಲ್, ತಾಲೂಕು ಜೆಡಿಎಸ್ ಅಧ್ಯಕ್ಷ ಮುನಿಶಾಮಯ್ಯ, ದಲಿತ ಸಂಘಟನೆಯ ಕಾರಹಳ್ಳಿ ಶ್ರೀನಿವಾಸ್, ಖಾಸಗಿ ಶಾಲಾ ಕಾಲೇಜುಗಳ ಸಂಘದ ಅಧ್ಯಕ್ಷ ಬಿ. ಚೇತನ್ ಗೌಡ, ಡಾ.ನರಸಿಂಹಮೂರ್ತಿ, ಮಹಿಳಾ ಸಂಘಟನೆಯ ಸೂರ್ಯಕಲಾ ಮೂರ್ತಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸಿ.ಮುನಿರಾಜು, ಹೋರಾಟ ಸಮಿತಿಯ ಸಂಚಾಲಕ ಜೆಡಿಯು ಶ್ರೀನಿವಾಸ್ ಭಾಗವಹಿಸಿದ್ದರು. ಈ ಬಂದ್ಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರಕ್ಕೆ ಈಗಾಗಲೇ ಮಂಜೂರಾಗಿರುವ ಉಪ ವಿಭಾಗಾಧಿಕಾರಿಗಳ ಕಚೇರಿ ಸ್ಥಳಾಂತರದ ಸರ್ಕಾರದ ಆದೇಶ ರದ್ದಾಗಬೇಕು. ದೇವನಹಳ್ಳಿಗೆ ಜಿಲ್ಲಾಧಿಕಾರಿಗಳ ಕಚೇರಿಯೊಂದಿಗೆ ಎಲ್ಲ ಇಲಾಖೆಗಳ ಜಿಲ್ಲಾ ಕಚೇರಿಗಳು ಸ್ಥಳಾಂತರವಾಗಲೇಬೇಕು. ಈ ಬೇಡಿಕೆಗಳು ಈಡೇರುವವರೆಗೂ ಪ್ರತಿ ದಿನ ವಿವಿಧ ರೀತಿಯ ಹೋರಾಟಗಳನ್ನು  ಜಿಲ್ಲಾ ಹೋರಾಟ ಸಮಿತಿ ಹಮ್ಮಿಕೊಳ್ಳುತ್ತದೆ ಎಂದು ಸಂಚಾಲಕ ಬಿ.ಕೆ.ಶಿವಪ್ಪ ತಿಳಿಸಿದರು.  ಮಂಗಳವಾರ ಕರೆ ನೀಡಿರುವ ಬಂದ್ಗೆ ಬೆಂಬಲವಾಗಿ ವಕೀಲರು ನ್ಯಾಯಾಲಯಗಳ ಕಲಾಪಕ್ಕೆ ಬಹಿಷ್ಕಾರ ಹಾಕಿ ಎಲ್ಲ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಎನ್. ಶ್ರೀನಿವಾಸಮೂರ್ತಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.