ಬೆಂಗಳೂರು ಗ್ರಾಮಾಂತರ

ಲಯನ್ಸ್ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ

Published On :

ದೇವನಹಳ್ಳಿ : ಇಲ್ಲಿನ ಲಯನ್ಸ್ ಮತ್ತು ಲಯನೆಸ್ ಸಂಸ್ಥೆ ಹಾಗೂ ಲಯನ್ಸ್ ಸೇವಾ ಪ್ರತಿಷ್ಠಾನ ಸಂಸ್ಥೆಯ ಆವರಣದಲ್ಲಿ  ಗಣರಾಜ್ಯೋತ್ಸವ ಸಮಾರಂಭವನ್ನು ಆಯೋಜಿಸಲಾಗಿತ್ತು.
ಮಾಜಿ ಶಾಸಕ ಜಿ.ಚಂದ್ರಣ್ಣ ರಾಷ್ಟ್ರಧ್ವಜಾರೋಹಣ ನೆರವೇರಿಸಿ ನಮ್ಮ ಭಾರತಕ್ಕೆ ಉತ್ತಮ ಸಂವಿಧಾನ ರೂಪಿಸಿಕೊಟ್ಟ ಡಾ.ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರಲ್ಲದೆ ಇತರ ರಾಷ್ಟ್ರಗಳಿಗಿಂತ ನಮ್ಮ ಸಂವಿಧಾನ ಹೆಚ್ಚು ಪ್ರಭಾವಶಾಲಿಯಾಗಿದೆ ಎಂದರು.
ಸಮಾರಂಭಜದಲ್ಲಿ ಸಂಘದ ಅಧ್ಯಕ್ಷ ಆರ್.ನಾಗರಾಜಯ್ಯ, ಲಯನೆಸ್ ಸಂಸ್ಥೆ ಅಧ್ಯಕ್ಷೆ ಪದ್ಮಾವತಮ್ಮ, ಲಯನ್ಸ್ ಸೇವಾ ಪ್ರತಿಷ್ಠಾನ ಅಧ್ಯಕ್ಷ ಕೆ.ಸಿ.ಲೋಕೇಶ್ ಹಾಗೂ ಮಾಜಿ ಅಧ್ಯಕ್ಷರಾದ ಸಿ. ಭಾಸ್ಕರ್, ಡಾ.ಮುನಿವೆಂಕಟಪ್ಪ, ಕಾರ್ಯದರ್ಶಿ ಕೆ.ಎಸ್. ರಮೇಶ್ಬಾಬು ಉಪಸ್ಥಿತರಿದ್ದರು. ಶಾಲಾ ಮಕ್ಕಳಿಗೆ ಬಿಸ್ಕತ್ ಪ್ಯಾಕೆಟ್ಗಳನ್ನು ಹಂಚಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.