ಅಪಘಾತ: ದ್ವಿಚಕ್ರವಾಹನ ಸವಾರ ಸಾವು
ಕನಕಪುರ: ಕನಕಪುರ ಸಂಗಮ ರಸ್ತೆಯ ಹುಲಿಬೆಲೆ ಗ್ರಾಮದ ಸಮೀಪ ಸಾರಿಗೆ ಸಂಸ್ಥೆ ವಾಹನ ಹಾಗೂ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರನು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ನತದೃಷ್ಟ ವ್ಯಕ್ತಿಯನ್ನು ಬೆಂಗಳೂರಿನ ಜೆ.ಪಿ.ನಗರದ ನಿವಾಸಿ ಚೇತನ್ ಶಿವಕುಮಾರ್(27) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಹೆಚ್ಪಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಕುಮಾರ್ ವಾರಾಂತ್ಯದ ವಿಹಾರಕ್ಕೆಂದು ಪ್ರಸಿದ್ಧ ಪ್ರೇಕ್ಷಣೀಯ ಸ್ಥಳವಾದ ಸಂಗಮಕ್ಕೆ ಗೆಳೆಯರೊಂದಿಗೆ ತೆರಳುತ್ತಿದ್ದು ಹುಲಿಬೆಲೆ ಗ್ರಾಮದ ಸಮೀಪದ ದಿಣ್ಣೆಯ ಬಳಿ ಎದುರಿನಿಂದ ನಲ್ಲಹಳ್ಳಿ ಗ್ರಾಮದಿಂದ ಬರುತ್ತಿದ್ದ ಸಾರಿಗೆಸಂಸ್ಥೆ ವಾಹನ ಡಿಕ್ಕಿಹೊಡೆದ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಕನಕಪುರದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಆರಕ್ಷಕ ಉಪನಿರೀಕ್ಷಕ ಲೋಕೇಶ್, ಸಹಾಯಕ ನಿರೀಕ್ಷಕ ಈಶ್ವರಯ್ಯ ಭೇಟಿನೀಡಿ ಮೊಕದ್ದಮೆ ದಾಖಲಿಸಿ ತನಿಖೆ ನಡೆಸಿದ್ದಾರೆ.
ವ್ಯಕ್ತಿ ಆತ್ಮಹತ್ಯೆ
ಮಾಗಡಿ: ಜೀವನದಲ್ಲಿ ಜಿಗುಪ್ಸೆ ಹೊಂದಿದ ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ಪಟ್ಟಣದ ಎನ್ಇಎಸ್ ಬಡಾವಣೆ ಗಾಂಧಿನಗರದ ಕರ್ಣೀಕರ ಕಲ್ಯಾಣ ಬಳಿ ನಡೆದಿದೆ. ಮೃತ ವ್ಯಕ್ತಿ ವೆಂಕೇಟೇಶ್ (40). ಈತ ಪೇಯಿಂಟ್ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ, ಕಳೆದ 3 ತಿಂಗಳ ಹಿಂದೆ ಹೆಂಡತಿ ಗಂಗಮ್ಮ ಜಗಳ ಮಾಡಿಕೊಂಡು ಮಕ್ಕಳೊಂದಿಗೆ ತವರಿಗೆ ತೆರಳಿದ್ದಳು. ಹೆಂಡತಿ ಮನೆಗೆ ಬಾರದ ಕಾರಣ ನೊಂದು ಭಾನುವಾರ ರಾತ್ರಿ ವೇಳೆ ಮನೆಯಲ್ಲಿ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೆಂಕಟೇಶ್ಗೆ ಇಬ್ಬರು ಹೆಣ್ಣು ಮಕ್ಕಳು, ಒಂದು ಗಂಡು ಮಗುವಿದೆ. ಮಾಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

