ಬೆಂಗಳೂರು ಗ್ರಾಮಾಂತರ

ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್: ಇಬ್ಬರಿಗೆ ತೀವ್ರ ಗಾಯ

Published On :

ಚನ್ನಪಟ್ಟಣ: ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ದ್ವಿಚಕ್ರವಾಹನ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ತೀವ್ರ ಗಾಯ ಗೊಂಡಿರುವ ಘಟನೆ ತಾಲೂಕಿನ ಮಳೂರುಪಟ್ಟಣ ಗ್ರಾಮದಲ್ಲಿ ನಡೆದಿದೆ. ಕೂಡ್ಲೂರು ಸಮೀಪದ ಕಣ್ವ ನದಿಯಿಂದ ಅಕ್ರಮವಾಗಿ ಮರಳು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಎದುರಿನಿಂದ ಬಂದ ದ್ವಿಚಕ್ರವಾಹನ ಸವಾರರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿರುವ ಹರೀಶ್ ಮತ್ತು ಶ್ವೇತರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ.
ಅತಿವೇಗ ಕಾರಣ: ಮರಳನ್ನು ಬೇಗ ಸಾಗಿಸಬೇಕೆಂಬ ಕಾರಣಕ್ಕೆ ಅತಿವೇಗವಾಗಿ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದುದೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಒಂದೆಡೆ ಸಿದ್ದರಾಮಹೆಗಡೆ ಮರಳು ಗಣಿಗಾರಿಕೆ ನಿಷೇಧಕ್ಕೆ ಆಗ್ರಹಿಸಿ ಸತ್ಯಾಗ್ರಹ ನಡೆಸುತ್ತಿದ್ದು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡುತ್ತಿರುವ ತಾಲೂಕು ಮತ್ತು ಜಿಲ್ಲಾಡಳಿತ ನಿರಂತರವಾಗಿ ನಡೆಯುತ್ತಿರುವ ಮರಳು ಗಣಿಗಾರಿಕೆಯ ಬಗ್ಗೆ ಜಾಣ ಮೌನ ತಳೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.