ಸಮಾನ ರೀತಿಯ ಶಿಕ್ಷಣ ಇರಲಿ: ದಯಾನಂದ
ಆನೇಕಲ್ಲು: ಪ್ರೌಢಶಾಲೆಯ ಹಂತದಲ್ಲಿ ಮಕ್ಕಳಿಗೆ ಸಮಾನ ರೀತಿಯ ಶಿಕ್ಷಣ ನೀಡಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ಇರಬಾರದೆಂದು ಮೇಲ್ಮನೆ ಸದಸ್ಯ ಬಿ.ಟಿ. ದಯಾನಂದ ಅಭಿಪ್ರಾಯ ಪಟ್ಟಿದ್ದಾರೆ.
ಅವರು ಆನೇಕಲ್ಲಿನಲ್ಲಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣಕ್ಕಾಗಿ ನೂರಾರು ಕೋಟಿ ರು. ವ್ಯಯಿಸುತ್ತಿದ್ದು ಪಠ್ಯ ಕ್ರಮದಲ್ಲಿ ಸಮಾನತೆ ಕಾಣುತ್ತಿಲ್ಲ. ಪ್ರಾದೇಶಿ ಭಾಷಾ ತಾರತಮ್ಯದ ಜೊತೆಗೆ ಶಿಕ್ಷಣ ಅನುಷ್ಠಾನದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಆದ್ಯತೆ ನೀಡಬೇಕಿದೆ ಎಂದರು.
ವಿಧಾನ ಪರಿಷತ್ ಹಾಗೂ ಸದನದಲ್ಲಿ ಈ ಬಗ್ಗೆ ಚರ್ಚಿಸಲು ಅನುವಾಗುವಂತೆ ಪ್ರಶ್ನೆಗಳು ಮೂಡಬೇಕೆಂದು ಶಾಸಕ ಬಿ. ಶಿವಣ್ಣಗೆ ತಿಳಿಸಿದರು.
ವೇದಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳು, ಪುರಪ್ರಮುಖರು ಹಾಗೂ ಮುಖಂಡರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

