ಶಿಕ್ಷಣ ಕ್ಷೇತ್ರದಲ್ಲಿ ಭ್ರಷ್ಟಾಚಾರ: ಪುಟ್ಟಣ್ಣ ವಿಷಾದ
ಕನಕಪುರ: ಪವಿತ್ರವಾದ ಶಿಕ್ಷಣ ಕ್ಷೇತ್ರ ಇಂದು ಗಬ್ಬೆದ್ದು ನಾರುತ್ತಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಿಇಒ ಕಚೇರಿಯಿಂದ ಮೊದಲುಗೊಂಡು ಸಚಿವಾಲಯದವರೆಗೂ ಲಂಚ, ರುಶುವತ್ತುಗಳು ನಡೆಯುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದರು.
ಅವರು ಕನಕಪುರದ ಗ್ರಾಮಾಂತರ ಬಾಲಕಿಯರ ಪ್ರೌಢಶಾಲೆಯಲ್ಲಿ ಶಿಕ್ಷಕರ ಸಭೆ ಉದ್ದೇಶಿಸಿ ಮಾತನಾಡಿ, ಸಾಮಾನ್ಯ ಶಿಕ್ಷಕರು ಮಾಸಿಕ ಸಂಬಳಕ್ಕೂ ಪರದಾಡಬೇಕಾಗಿರುವುದು ವಿಪರ್ಯಾಸ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಸಧ್ಯದಲ್ಲಿಯೇ ನಡೆಯುತ್ತಿದ್ದು ಪ್ರಜ್ಞಾವಂತ ಶಿಕ್ಷಕ ಸಮುದಾಯ ಅವರ ಸಮಸ್ಯೆಗಳಿಗೆ ಸ್ಪಂದಿಸುವ, ತೊಂದರೆಗಳನ್ನು ನೀಗಿಸುವ ಅಭ್ಯರ್ಥಿಯನ್ನು ಆರಿಸಬೇಕು. ರಾಜ್ಯ ಸರ್ಕಾರವು ಅನುದಾನಿತ ಸಂಸ್ಥೆಗಳ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ವಿರುದ್ಧವಾಗಿ ಕಾಯ್ದೆ ತರಲು ಮುಂದಾಗಿದ್ದು ಶಿಕ್ಷಕ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಶಿಕ್ಷಕರನ್ನು ಪಾಠ ಮಾಡುವ ಬದಲಾಗಿ ಅಡುಗೆ ಮಾಡಲು ಹಾಗೂ ಗುಮಾಸ್ತೆಯಂತೆ ಮಾಹಿತಿ ನಿರ್ವಹಿಸಲು ನಿಯೋಜಿಸಿದೆ. ಇದರಿಂದ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ ಎಂದರು.
ಕನಕಪುರ ತಾಲೂಕಿನ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಬಹಳಷ್ಟು ಗೋಲ್ಮಾಲ್ ನಡೆಯಲು ತಹಸೀಲ್ದಾರ್ ಡಾ.ದಾಕ್ಷಾಯಣಿ ಕಾರಣರಾಗಿದ್ದು ಐನೂರಕ್ಕೂ ಹೆಚ್ಚಿನ ಸೇರ್ಪಡೆಯನ್ನು ರದ್ದುಗೊಳಿಸಿದ್ದಾರೆ. ಇವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಸರ್ಕಾರವು ಈ ಭ್ರಷ್ಟ ಅಧಿಕಾರಿ ವಿರುದ್ಧ ತನಿಖೆ ನಡೆಸಿ ಹುದ್ದೆಯಿಂದಲೇ ತೆಗೆದುಹಾಕಬೇಕು ಎಂದು ಆಗ್ರಹಿಸಿದರು. ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಆರ್.ವಿ.ನಾರಾಯಣ, ವೆಂಕಟಾಚಲಯ್ಯ, ಅಂಕಮಾದೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

