ಬೈಕ್ ರ್ಯಾಲಿಗೆ ತಾಲೂಕು ಜೆಡಿಎಸ್ ವತಿಯಿಂದ ಅದ್ಧೂರಿ ಸ್ವಾಗತ
ಚನ್ನಪಟ್ಟಣ: ಯುವ ಚೇತನಾ ಸಮಾರಂಭದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ನೇತೃತ್ವದಲ್ಲಿ ಹಮ್ಮಿ ಕೊಂಡಿದ್ದ ಬೈಕ್ ರ್ಯಾಲಿಗೆ ತಾಲೂಕು ಜೆಡಿಎಸ್ ವತಿಯಿಂದ ಅದ್ಧೂರಿ ಸ್ವಾಗತ ದೊರೆಯಿತು.
ಪಟ್ಟಣದ ಸಿಪಿಟಿ ಗಾರ್ಡನ್ ಮುಂಭಾಗ ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಯುವ ಜೆಡಿಎಸ್ ಕಾರ್ಯಕರ್ತರು ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಎಸ್.ಲಿಂಗೇಶ್ ಕುಮಾರ್ ನೇತೃತ್ವದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಬಂದ ಬೈಕ್ ರ್ಯಾಲಿಯನ್ನು ಜಯ ಘೋಷದೊಂದಿಗೆ ಸ್ವಾಗತಿಸಿದರು.
ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿದ ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಜೆಡಿಎಸ್ ಅನ್ನು ಅಧಿಕಾರಕ್ಕೆ ತರಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಕೋರಿದರಲ್ಲದೆ, ಯುವ ಚೇತನ ರ್ಯಾಲಿ ಬೆಂಬಲಿಸಿ ಯಶಸ್ವಿ ಗೊಳಿಸುವಂತೆ ಮನವಿ ಮಾಡಿದರು.
ಸಾವಿರಾರು ಬೈಕ್ಗಳು: ಕುಮಾರಸ್ವಾಮಿ ಅವರ ನಾಯಕತ್ವ ಬೆಂಬಲಿಸಿ ತಾಲೂಕಿನಿಂದ ಸಾವಿರಕ್ಕೂ ಹೆಚ್ಚು ಬೈಕ್ಗಳು ತೆರಳುತ್ತಿದ್ದು ಸಾವಿರಾರು ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ವಿವಿಧ ತಾಲೂಕುಗಳಿಂದಲೂ ಸಾಕಷ್ಟು ಮಂದಿ ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಕುಮಾರಸ್ವಾಮಿ ಕೈ ಬಲಪಡಿಸಲಿರುವುದಾಗಿ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಎಸ್. ಲಿಂಗೇಶ್ ಕುಮಾರ್ ತಿಳಿಸಿದರು. ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಕುಮಾರಸ್ವಾಮಿ ಕೈ ಬಲಪಡಿಸಬೇಕಾದ ಅಗತ್ಯತೆ ಸಾಕಷ್ಟಿದ್ದು, ಯುವಕರು ದೇಶದ ಭವಿಷ್ಯಕ್ಕಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಸಬೇಕೆಂಬ ಉದ್ದೇಶದಿಂದ ಈ ಸಮಾವೇಶ ಹಮ್ಮಿಕೊಂಡಿದ್ದು ಜಿಲ್ಲೆಯಾದ್ಯಂತ ಈ ಸಮಾವೇಶಕ್ಕೆ ಉತ್ತಮ ಸ್ಪಂದನೆ ದೊರೆತಿದೆ ಎಂದು ಸಂತಸ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಹಿರಿಯ ಮುಖಂಡ ಸಿಂ.ಲಿಂ.ನಾಗರಾಜು, ತಾಲೂಕು ಜೆಡಿಎಸ್ ಅಧ್ಯಕ್ಷ ವಡ್ಡರಹಳ್ಳಿ ರಾಜಣ್ಣ, ನಗರ ಜೆಡಿಎಸ್ ಅಧ್ಯಕ್ಷ ಸತ್ಯನಾರಾಯಣ, ಟಿಎಪಿಸಿಎಂಎಸ್ ಅಧ್ಯಕ್ಷ ಜಿ.ಕೃಷ್ಣೇಗೌಡ, ಜಿ.ಪಂ ಸದಸ್ಯ ರಘುಕುಮಾರ್, ಯುವ ಜೆಡಿಎಸ್ ಅಧ್ಯಕ್ಷ ಜಯಪ್ರಕಾಶ್, ಸತೀಶ್ ಬಾಬು, ವಿದ್ಯಾರ್ಥಿ ಘಟಕದ ಅಧ್ಯಕ್ಷ ಆಶೀಶ್, ತಾ.ಪಂ. ಸದಸ್ಯ ಕಾಂತರಾಜ್, ನಗರಸಭಾ ಸದಸ್ಯ ಜೆಸಿಬಿ ಲೋಕೇಶ್, ಪರೀದ್, ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

