ಸತತ ಪರಿಶ್ರಮ ಪಟ್ಟರೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣ ಸಾಧ್ಯ
ರಾಮನಗರ: ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಪಾಲಿಗೆ ಪ್ರಮುಖವಾದ ಘಟ್ಟ. ನಿರ್ದಿಷ್ಟ ಗುರಿಯೊಂದಿಗೆ ಸತತ ಪರಿಶ್ರಮ ಪಟ್ಟರೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯೋನ್ಮುಖರಾಗಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಡಿ. ಲಿಂಗರಾಜು ಕರೆ ನೀಡಿದರು.
ನಗರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಪ್ರಾಂಶುಪಾಲರ ಮತ್ತು ಉಪನ್ಯಾಸಕರ ಸಂಘಗಳಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಇಂಗ್ಲಿಷ್ ಮತ್ತು ವಿಜ್ಞಾನ ವಿಷಯಗಳ ವಿಶೇಷ ಬೋಧನಾ ತರಗತಿಗಳ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪಿಯುಸಿ ನಂತರ ಹಲವು ಕ್ಷೇತ್ರಗಳು ಲಭ್ಯವಿರುತ್ತವೆ. ಹೆಚ್ಚು ಅಂಕಗಳನ್ನು ಗಳಿಸಿದವರು ಮಾತ್ರ ಉತ್ತಮವಾದ ಕೋರ್ಸುಗಳಿಗೆ ಸೇರಲು ಅರ್ಹರಾಗಿರುತ್ತಾರೆ. ಹೆಚ್ಚಿನ ಅಂಕ ಗಳಿಸದವರು ಸಾಮಾನ್ಯ ಕೋರ್ಸುಗಳನ್ನು ಪಡೆಯಬೇಕಾಗುತ್ತದೆ. ಜೀವನದ ದಿಕ್ಕನ್ನೇ ಬದಲಿಸುವಂತ ಪದವಿ ಪೂರ್ವ ಶಿಕ್ಷಣವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು ಎಂದು ಸಲಹೆ ನೀಡಿದರು.
ಗ್ರಾಮೀಣ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಬ್ಬಿಣದ ಕಡಲೆ ಎನ್ನುವಂತಾಗಿದೆ. ಈ ಭಯವನ್ನು ಹೋಗಲಾಡಿಸಿ, ಅವರಲ್ಲಿ ಆತ್ಮವಿಶ್ವಾಸ ತುಂಬುವ ಸದುದ್ದೇಶದಿಂದ ವಿಶೇಷ ಬೋಧನಾ ತರಗತಿಗಳನ್ನು ನಡೆಸಲಾಯಿತು. ಇಂಗ್ಲೀಷ್ ಹಾಗೂ ವಿಜ್ಞಾನ ವಿಷಯಗಳ ಅಧ್ಯಾಪಕರು ಇಲ್ಲಿ ಪ್ರವಚನ ನೀಡಿದ್ದಾರೆ. ಭಾಗವಹಿಸಿದ್ದ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಆತ್ಮವಿಶ್ವಾಸ ಹೊಂದಿದ್ದಾರೆ ಎಂದು ಲಿಂಗರಾಜು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

