ಕನಕಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ
ಕನಕಪುರ: ಕನಕಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವ ಬಗ್ಗೆ ಪೂರ್ವಭಾವಿ ಸಿದ್ಧತಾ ಸಭೆ ಹಾರೋಹಳ್ಳಿ ಗ್ರಾಪಂ ಸಭಾಂಗಣದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಮಲ್ಲಪ್ಪ ನೇತೃತ್ವದಲ್ಲಿ ನಡೆಯಿತು. ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಟಿ.ನಾಗೇಶ್ ಅಧ್ಯಕ್ಷತೆ ವಹಿಸಿದ್ದರು.
ಸ್ವಾಗತಸಮಿತಿ ಅಧ್ಯಕ್ಷ ಮಲ್ಲಪ್ಪ ಮಾತನಾಡಿ, ಕನಕಪುರ ತಾಲೂಕು ಸಮ್ಮೇಳನವನ್ನು ಮಾರ್ಚ್ 14 ಮತ್ತು 15ರಂದು ಹಾರೋಹಳ್ಳಿಯಲ್ಲಿ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದ್ದು, ಈ ವೇಳೆಯಲ್ಲಿಯೇ ಗ್ರಾಪಂ ವತಿಯಿಂದ ಕಸಾಪಗೆ ನೀಡಿರುವ ನಿವೇಶನದಲ್ಲಿ ಕನ್ನಡಭವನ ಕಟ್ಟಲು ಭೂಮಿಪೂಜೆ ನೆರವೇರಿಸಲಾಗುವುದು, ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ತಾಲೂಕು ಕಸಾಪ ಅಧ್ಯಕ್ಷ ಶಿವನಹಳ್ಳಿ ಶಿವಲಿಂಗಯ್ಯ ಮಾತನಾಡಿ ಸಮ್ಮೇಳನದಲ್ಲಿ ಜಾನಪದ ಕಲಾಮೇಳಗಳಿಂದ ಕೂಡಿದ ಅದ್ಧೂರಿ ಮೆರವಣಿಗೆ, ವಸ್ತುಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿಗಳನ್ನು ಆಯೋಜಿಸಲಾಗಿದೆ. ಸಮ್ಮೇಳನದ ನೆನಪನ್ನು ಚಿರಂತನವಾಗಿಸಲು ಸ್ಮರಣ ಸಂಚಿಕೆ ಹೊರತರಲಾಗುವುದು, ಸಮ್ಮೇಳನದ ಸಿದ್ಧತೆಗಾಗಿ ಸಮಿತಿಗಳ ರಚನೆ ನಡೆಯಲಿದೆ, ಎಂದು ಹೇಳಿದರು.
ಸಭೆಯಲ್ಲಿ ಗ್ರಾಪಂ ಅಧ್ಯಕ್ಷ ವೆಂಕಟರಾಜು, ಪಿಡಿಓ ಶ್ರೀನಿವಾಸ್, ತಾಪಂ ಸದಸ್ಯ ಪುರುಷೋತ್ತಮ್, ಜಿಲ್ಲಾ ಕಾರ್ಯದರ್ಶಿ ಮಹೇಶ್, ಕೂ.ಗಿ. ಗಿರಿಯಪ್ಪ, ಯಾಕೂಬ್ ಪಾಷ, ಶಿವನಂಜಯ್ಯ ಮೊದಲಾದವರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

