ಬೆಂಗಳೂರು ಗ್ರಾಮಾಂತರ

ರೈತ ಆತ್ಮಹತ್ಯೆ

Published On :

ಸೂಲಿಬೆಲೆ: ಹೋಬಳಿಯ ಅತ್ತಿಬೆಲೆ ಗ್ರಾಮದಲ್ಲಿನ ಪ್ರಗತಿಪರ ರೈತ ಪ್ರಶಸ್ತಿಯನ್ನು ಪಡೆದುಕೊಂಡಿದ್ದ ಯುವಕ ನವೀನ್ (27) ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಆಧುನಿಕ ತಂತ್ರಜ್ಞಾನವನ್ನು ಬಳಿಸಿಕೊಂಡು ವ್ಯವಸಾಯದಲ್ಲಿ ಪ್ರಗತಿಯನ್ನು ಸಾಧಿಸಿ ಲಕ್ಷಾಂತರ ಹಣವನ್ನು ವ್ಯವಸಾಯದಲ್ಲಿ ಗಳಿಸಬಹುದು ಎಂಬ ಸಂದೇಶವನ್ನು ಇತರೆ ರೈತರಿಗೆ ತೋರಿಸಿಕೊಟ್ಟಿದ್ದ ನವೀನ್ ಅನೇಕ ಸಂಸ್ಥೆಗಳಿಂದ ಪ್ರಗತಿಪರ ರೈತ ಯುವಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದ. ವೈಯುಕ್ತಿಕ ಕಾರಣಗಳಿಂದಾಗಿ ರಾತ್ರಿ ವಿಷದ ಕಾಳು ಮಾತ್ರೆ ತಿಂದು ಹೊಟ್ಟೆ ಉರಿ ತಾಳಲಾರದೆ ಮನೆಯ ಮುಂದಿನ ನೀರಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಸೂಲಿಬೆಲೆ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.