ಬೆಂಗಳೂರು ಗ್ರಾಮಾಂತರ

ಶಿಕ್ಷಕರಿಗೆ ಪುಟ್ಟಣ್ಣ ಕೊಡುಗೆ ಶೂನ್ಯ

Published On :

ಚನ್ನಪಟ್ಟಣ:  ಕಳೆದ 12 ವರ್ಷಗಳಿಂದ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಪುಟ್ಟಣ್ಣ ಶಿಕ್ಷಕ ಸಮುದಾಯಕ್ಕೆ ನೀಡಿರುವ ಕೊಡುಗೆ ಶೂನ್ಯವಾಗಿದ್ದು, ಅವರು ಈ ಕ್ಷೇತ್ರಕ್ಕೆ ಸೇವೆಸಲ್ಲಿಸಿದ್ದಲ್ಲಿ ಈ ಬಾರಿಯ ಚುನಾವಣೆಯನ್ನು ಪ್ರಮಾಣಿಕವಾಗಿ ಎದುರಿಸಲಿ ಎಂದು ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಸೇವಾಕಾಂಕ್ಷಿ ನೀಲಯ್ಯ ಸವಾಲು ಹಾಕಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಾಮ ಮಾರ್ಗದಲ್ಲಿ ಪುಟ್ಟಣ್ಣ ಚುನಾವಣೆ ಎದುರಿಸಲು ಸನ್ನದ್ಧವಾಗಿದ್ದು ಹೋದ ಕಡೆಯಲ್ಲೆಲ್ಲ ಶಾಲೆಗಳಲ್ಲಿ ವಿವಿಧ ಕಾಮಗಾರಿ ಕೈಗೊಳ್ಳಲು 5ಲಕ್ಷ ರು. ಅನುದಾನ ನೀಡುವುದಾಗಿ ಘೋಷಿಸುತ್ತಿದ್ದಾರೆ. ಅವರ ಅನುದಾನ ಕೇವಲ 30 ಲಕ್ಷ ರು. ಉಳಿದಿದ್ದು ಈ ಹಣವನ್ನು 36 ವಿಧಾನ ಸಭಾ ಕ್ಷೇತ್ರವನ್ನೊಳಗೊಳ್ಳುವ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎಷ್ಟು ಹಂಚಿಕೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ನನಗೂ ಅವಕಾಶ ನೀಡಿ: ಶಿಕ್ಷಕರ ಹಿತ ಕಾಯಬೇಕಾಗಿದ್ದು, ಹಿಂದಿನವರಿಗೆ ಎರಡು ಬಾರಿ ಅವಕಾಶ ನೀಡಿದ್ದೀರಿ. ನನಗೂ ಒಂದುಬಾರಿ ಅವಕಾಶ ಕೊಟ್ಟರೆ ನಾನು ಏನೆಂದು ತೋರಿಸುತ್ತೇನೆ ಎಂದು ಮನವಿ ಮಾಡಿದರು. ನನಗೆ ಅಧಿಕಾರ ಇಲ್ಲದಿದ್ದರೂ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾನು ಅಂದಿನ ಶಿಕ್ಷಣ ಸಚಿವ ಕಾಗೇರಿ ಜತೆ ನಿಕಟ ಸಂಪರ್ಕ ಹೊಂದಿದ್ದ ಕಾರಣ ಶಿಕ್ಷಕರ ಹಲವಾರು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೊಡಿಸಿದ್ದೇನೆ. ಅವಕಾಶ ನೀಡಿದರೆ ಮತ್ತಷ್ಟು ಕೆಲಸ ಮಾಡುತ್ತೇನೆ ಎಂದರು. ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಮಹಾಲಿಂಗಯ್ಯ, ತಾಲೂಕು ಬಿಜೆಪಿ ಅಧ್ಯಕ್ಷ ಪುಟ್ಟಪ್ಪ, ರಘುನಾಥ್, ಕೃಷ್ಣೇಗೌಡ, ಸಿ.ಪಿ.ಶ್ರೀನಿವಾಸ್, ಚಿಕ್ಕೇಗೌಡ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.