ಮೌಲ್ಯಮಾಪನ ನಂತರ ಜಿಲ್ಲೆಗೇ ಪ್ರಥಮ ಸ್ಥಾನ!
ದೇವನಹಳ್ಳಿ: ಇಲ್ಲಿನ ಸ್ಟರ್ಲಿಂಗ್ ಆಂಗ್ಲ ಶಾಲೆಯ ವಿದ್ಯಾರ್ಥಿ ಜಿ. ದರ್ಶಿತ್ ಕುಮಾರ್ ಕಳೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದೇವನಹಳ್ಳಿ ತಾಲೂಕಿಗೆ ನಾಲ್ಕನೇ ಸ್ಥಾನ ಪಡೆದಿದ್ದು ಮರುಮೌಲ್ಯ ಮಾಪನ ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲೆಗೇ ಪ್ರಥಮ ಸ್ಥಾನ ಗಳಿಸಿರುವುದಾಗಿ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಕೆ.ಬಿ.ಅಶೋಕ್ ಪತ್ರಕರ್ತರಿಗೆ ತಿಳಿಸಿದ್ದಾರೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ಏಪ್ರಿಲ್ 2014ರ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದ ಪಟ್ಟಿಯಲ್ಲಿ ಸ್ಟರ್ಲಿಂಗ್ ಶಾಲೆಯ ಜಿ. ದರ್ಶಿತ್ಕುಮಾರ್ 604 (ಶೇ.96.64)ಅಂಕಗಳನ್ನು ಪಡೆದು ತಾಲೂಕಿಗೆ 4 ನೇ ಸ್ಥಾನ ಪಡೆದಿದ್ದನು. ಆದರೆ ಆ ವಿದ್ಯಾರ್ಥಿ ಉತ್ತರ ಪತ್ರಿಕೆಯ ಮರುಮೌಲ್ಯ ಮಾಪನ ಮಾಡಿಸಿದಾಗ 614 (ಶೇ. 98.24) ಅಂಕಗಳನ್ನು ಪಡೆದು ಕೇವಲ ತಾಲೂಕಿಗೆ ಅಲ್ಲದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೇ ಪ್ರಥಮ ಸ್ಥಾನ ಗಳಿಸಿದ್ದಾನೆ.
ಮರುಮೌಲ್ಯ ಮಾಪನ ಪಟ್ಟಿಯಲ್ಲಿ ಕನ್ನಡ- (122) 124, ಆಂಗ್ಲ ಭಾಷೆ (96) 98, ಹಿಂದಿ (96) 99, ಗಣಿತ (97) 97, ವಿಜ್ಞಾನ (99) 99, ಸಮಾಜ ವಿಜ್ಞಾನ (94) 97 ಸೇರಿ ಒಟ್ಟು 614 ಅಂಕಗಳನ್ನು ಪಡೆದಿದ್ದಾನೆ ಎಂದು ಎಸ್ಎಸ್ಎಲ್ಸಿ ಪರೀಕ್ಷಾ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ ಎಂದು ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ತಿಳಿಸಿ ಇದೇ ಶಾಲೆಯ ವಿದ್ಯಾರ್ಥಿನಿ ಸತ್ಯಶ್ರೀ 609 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದಳು. ಆದರೆ ಈಗ ಎರಡನೇ ಸ್ಥಾನಕ್ಕೆ ಬಂದಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

