ಬೆಂಗಳೂರು ಗ್ರಾಮಾಂತರ

ವಿಜ್ಞಾನ ಬರವಣಿಗೆ ಶಿಬಿರ

Published On :


ರಾಮನಗರ:  ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯದ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರು, ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳು ಹಾಗೂ ವರದಿಗಾರರಿಗೆ ವಿಜ್ಞಾನ ಬರವಣಿಗೆಯ ತರಬೇತಿ ಶಿಬಿರವು ಜು.26ರಿಂದ 30ರವರೆಗೆ ಗುಲ್ಬರ್ಗಾ ಜಿಲ್ಲೆಯಲ್ಲಿ ನಡೆಯಲಿದೆ.
ವಿಜ್ಞಾನ ಬರವಣಿಗೆಯಲ್ಲಿ ಆಸಕ್ತಿ ಇರುವ ವಿಜ್ಞಾನ ಶಿಕ್ಷಕರು, ಯುವ ಪತ್ರಿಕಾ ವರದಿಗಾರರು, ಚಿತ್ರ ನಿರೂಪಕರು, ರೇಡಿಯೋ ಭಾಷಣಕಾರರು ಶಿಬಿರದಲ್ಲಿ ಭಾಗವಹಿಸಬಹುದು. ನುರಿತ ವಿಜ್ಞಾನ ಬರಹಗಾರರು, ಸಂವಹನಕಾರರಿಂದ ಶಿಬಿರಾರ್ಥಿಗಳಿಗೆ ವಿಜ್ಞಾನ ಬರವಣಿಗೆಯ ಕುರಿತ ವಿವಿಧ ಕೌಶಲ್ಯ, ಆಕರ, ಶಬ್ದ ಬಳಕೆ, ಅನುವಾದ, ವಿಜ್ಞಾನ ಪತ್ರಿಕೋದ್ಯಮ ಮುಂತಾದ ಅಂಶಗಳಲ್ಲಿ ತರಬೇತಿ ನೀಡಲಾಗುವುದು.ಶಿಬಿರದಲ್ಲಿ ಭಾಗವಹಿಸುವವರು ವಿಜ್ಞಾನ ಸಂವಹನದಲ್ಲಿ ವಿಶೇಷ ಆಸಕ್ತಿ ಹೊಂದಿರಬೇಕು. ಸ್ವರಚಿತ ಕನ್ನಡ ವೈಜ್ಞಾನಿಕ ಲೇಖನದ ಪ್ರತಿಯೊಂದಿಗೆ ಅರ್ಜಿಯನ್ನು ಡಾ.ವಸುಂಧರಾ ಭೂಪತಿ, ಗೌರವ ಕಾರ್ಯದರ್ಶಿ, ಕರ್ನಾಟಕ ವಿಜ್ಞಾನ ಪರಿಷತ್, ವಿಜ್ಞಾನಭವನ, ನಂ.24, 21ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು. ಜು.20ರೊಳಗೆ ಸಲ್ಲಿಸಬೇಕು. ಮಾಹಿತಿಗೆ ಮೊ. 9448219830, 94488-30454 ಸಂಪರ್ಕಿಸಬಹುದು.  


ಅಡುಗೆ ಅನಿಲ ಸಬ್ಸಿಡಿ ನೇರ

ರಾಮನಗರ: ಅಕ್ಷರ ದಾಸೋಹ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬಿಸಿಯೂಟ ತಯಾರಿಕೆಗೆ ಬಳಸುವ ಅಡುಗೆ ಅನಿಲದ ಹಣವನ್ನು ನೇರವಾಗಿ ಏಜೆನ್ಸಿಗಳಿಗೆ ಪಾವತಿಸುವಂತೆ ಜಿಪಂ ಹಂಗಾಮಿ ಅಧ್ಯಕ್ಷ ಎಂ.ಕೆ.ಧನಂಜಯ ಸೂಚಿಸಿದರು.ನಗರದ ಜಿಪಂ ಭವನದಲ್ಲಿ ನಡೆದ ಅಕ್ಷರ ದಾಸೋಹ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಕ್ಷರ ದಾಸೋಹ ಕಾರ್ಯಕ್ರಮದಡಿ ಅಡುಗೆ ತಯಾರಿಕೆಗೆ ಅನಿಲವನ್ನೇ ಬಳಸಬೇಕು ಎನ್ನುವ ನಿಯಮವನ್ನು ಕೆಲವೆಡೆ ಪಾಲಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಅನಿಲಕ್ಕೆ ಹಣ ಪಡೆದುಕೊಂಡು, ಅಡುಗೆ ತಯಾರಿಸಲು ಸೌದೆ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಪ್ರಕರಣಗಳನ್ನು ತಡೆಯಲು ಅಡುಗೆ ಅನಿಲ ಪೂರೈಸುವ ಏಜೆನ್ಸಿಗಳಿಗೆ ನೇರವಾಗಿ ಹಣ ಪಾವತಿಸುವ ವ್ಯವಸ್ಥೆಯನ್ನು ಜಾರಿಗೊಳಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳಿಗೆ ವಾರಕ್ಕೆ ಮೂರು ಬಾರಿ ಹಾಲು ನೀಡುವ ಯೋಜನೆ ಜಾರಿಯಲ್ಲಿದೆ. ಕೆಲವು ಶಾಲೆಗಳಲ್ಲಿ ನಿಗದಿತ ದಿನಗಳಂದು ಹಾಲು ನೀಡದೆ ಬಗ್ಗೆ ದೂರುಗಳಿವೆ. ತರಗತಿ ಪ್ರಾರಂಭಕ್ಕೆ ಮುನ್ನವೇ ಹಾಲು ನೀಡಬೇಕೆಂಬ ನಿಯಮ ಪಾಲನೆ ಆಗದಿರುವುದನ್ನು ಡಿಡಿಪಿಐ ಪ್ರಹ್ಲಾದಗೌಡ ಪ್ರಸ್ತಾಪಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.