ಬೆಂಗಳೂರು ಗ್ರಾಮಾಂತರ

ಬಾಬೂಜಿ ಕೊಡುಗೆ ಅನನ್ಯ ತಹಸೀಲ್ದಾರ್ ಶಿವಕುಮಾರ್

Published On :

ಮಾಗಡಿ: ಹಸಿರು ಕ್ರಾಂತಿಯ ಹರಿಕಾರ ಬಾಬೂಜಿ ಅವರು ರಾಷ್ಟ್ರಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ತಹಸೀಲ್ದಾರ್ ಶಿವಕುಮಾರ್ ಗುಣಗಾನ ಮಾಡಿದರು. ಅವರು ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಏರ್ಪಡಿಸಿದ್ದ ಡಾ.ಬಾಬೂಜಿ ಅವರ 28ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಡಾ.ಬಾಬು ಜಗಜೀವನ್ರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಆಕ್ರೋಶ: ಡಾ.ಬಿ.ಆರ್. ಅಂಬೇಡ್ಕರ್ ಭವನ ಇರುವುದು ಸರ್ಕಾರಿ ಕಾರ್ಯಕ್ರಮಗಳ ಆಚರಣೆ, ನಾಟಕ ಪ್ರದರ್ಶನ ನೀಡುವುದಕ್ಕಲ್ಲ. ನಮಗೆ ಕಲೆ, ಸಾಹಿತ್ಯ, ಕಲಾವಿದರ ಬಗ್ಗೆ ಅಪಾರ ಗೌರವವಿದೆ. ರಾಷ್ಟ್ರ ನಾಯಕರ ಪುಣ್ಯ ಸ್ಮರಣೆ ಇರುವ ದಿನವೇ ನಾಟಕೋತ್ಸವಕ್ಕೆ ಭವನ ನೀಡಿರುವ ಪುರಸಭೆ ಮುಖ್ಯಾಧಿಕಾರಿಗಳ ವಿರುದ್ಧ ತಾ.ಪಂ. ಮಾಜಿ ಅಧ್ಯಕ್ಷ ಜಿ.ಕೃಷ್ಣ, ದೊಡ್ಡಿ ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದರು.
ಗೈರು: ಬಹುತೇಕ ಅಧಿಕಾರಿಗಳು ಡಾ.ಬಾಬೂಜಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಗೈರು ಹಾಜರಿಯಾಗಿದ್ದರು. ತಾ.ಪಂ. ಮಾಜಿ ಅಧ್ಯಕ್ಷ ಜಿ.ಕೃಷ್ಣ, ದಲಿತ ಮುರ್ಖಡ ದೊಡ್ಡಿ ಲಕ್ಷ್ಮಣ್,ಸಿ. ಜಯರಾಂ, ಹಿರಿಯ ಕಲಾವಿದ ಹನುಮಂತಪ್ಪ, ಕೆಂಪೇಗೌಡ ಕನ್ನಡ ಸಂಸ್ಕತಿ ಮತ್ತು ಕಲಾವಿದರ ಸಂಘದ ಅಧ್ಯಕ್ಷ ಬಿ.ಆರ್. ಕೃಷ್ಣಪ್ಪ, ದಿನೇಶ್,ತಾ.ಪಂ. ಇಓ ರವಿ ಎಸ್. ಸೂರನ್, ಸಮಾಜ ಕಲ್ಯಾಣಾಧಿಕಾರಿ ನರಸಿಂಹಮೂರ್ತಿ, ತೋಟಗಾರಿಕೆ ಸಹಾಯಕ ನಿರ್ದೇಶಕ ಎಚ್. ಶಂಕರ್,ಕೃಷಿ ಇಲಾಖೆಯ ರಾಮಕೃಷ್ಣ, ಕೃಷ್ಣಮೂರ್ತಿ, ವೆಂಕಟೇಶ್, ಶಿಕ್ಷಕ ಕೆಂಚನರಸಯ್ಯ, ಪುರಸಭೆಯ ಮೋಹನ್ ಇತರರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.