ಬೆಂಗಳೂರು ಗ್ರಾಮಾಂತರ

ಮೂರು ಕಡೆ ವೃದ್ಧೆಯರ ಸರ ದೋಚಿದ ಚೋರರು

Published On :

ಬೆಂಗಳೂರು: ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರೆದಿದ್ದು ಭಾನುವಾರ ಬೆಳಗ್ಗೆ ಒಂದೇ ತಾಸಿನಲ್ಲಿ ಮೂರು ಕಡೆ ವೃದ್ಧರ ಸರ ಅಪಹರಿಸಿದ್ದಾರೆ. ವಿದ್ಯಾರಣ್ಯಪುರ ಎಚ್ಎಂಟಿ ಬಡಾವಣೆಯಲ್ಲಿ ಬೆಳಗ್ಗೆ 6.30ರ ವೇಳೆ ಹೂ ಬಿಡಿಸುತ್ತಿದ್ದ ಶಾಂತಕುಮಾರಿ (70) ಎಂಬುವರ ಸರ ಅಪಹರಿಸಿದ್ದಾರೆ. ವಿಳಾಸ ಕೇಳುವ ನೆಪದಲ್ಲಿ ಬೈಕ್ನಲ್ಲಿ ಬಂದು ದುಷ್ಕರ್ಮಿಗಳು 80 ಗ್ರಾಂ ಸರ ಕಸಿದು ಪರಾರಿಯಾಗಿದ್ದಾರೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂಪಿಗೆಹಳ್ಳಿ: ಇಲ್ಲಿನ ಬಿಡಿಎಸ್ ಬಡಾವಣೆಯ 3ನೇ ಕ್ರಾಸ್ನಲ್ಲಿ ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಸುಲೋಚನಾ (60) ಎಂಬುವರ ಬಳಿ ವಿಳಾಸ ಕೇಳುವ ನೆಪದಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ್ದಾರೆ. ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಾಣಸವಾಡಿ: ಇಲ್ಲಿನ ಎಚ್ಆರ್ಬಿಆರ್ ಬಡಾವಣೆ ನಿವಾಸಿ ವಾಸಂತಿ (70) ಎಂಬುವರು ಬೆಳಗ್ಗೆ 7.30ರ ಸುಮಾರಿಗೆ ವಾಯುವಿಹಾರ ಮುಗಿಸಿ ಮನೆಗೆ ಮರಳುತ್ತಿದ್ದಾಗ ಹಿಂದಿನಿಂದ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು 44 ಗ್ರಾಂ ಸರ ಕಸಿದು ಪರಾರಿಯಾಗಿದ್ದಾರೆ. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.