'ವಿಲಾಸಿ ಜೀವನ ಆರೋಗ್ಯಕ್ಕೆ ಹಾನಿಕರ'
ಮಾಗಡಿ: ಇತ್ತೀಚಗೆ ಜನರು ತಮ್ಮ ಒತ್ತಡ ಹಾಗೂ ವಿಲಾಸಿ ಜೀವನದಿಂದಾಗಿ ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ನೀಡುತ್ತಿಲ್ಲ, ಮನುಷ್ಯ ಆರೋಗ್ಯವಾಗಿದ್ದರೆ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಶಾಸಕ ಸುರೇಶ್ ಕುಮಾರ್ ತಿಳಿಸಿದರು.
ಅವರು ಪ್ರಸಿದ್ಧ ತಿರುಮಲೆ ಶ್ರೀರಂಗನಾಥಸ್ವಾಮಿ ದೇವಾಲಯದಿಂದ ಸಾವನದುರ್ಗದಕ್ಕೆ ಪಾದಯಾತ್ರೆ ನಡೆಸಿ ಮಾತನಾಡಿ ಸಾವನದುರ್ಗದ ಬೆಟ್ಟ ಏರಿ ಇಳಿಯುವುದು ಖುಷಿಯ ಸಂಗತಿ. ಪ್ರತಿ ಎರಡು ತಿಂಗಳಿಗೊಮ್ಮೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಪಾದಯಾತ್ರೆ ನನಗೆ ಬಹಳ ಆನಂದ ನೀಡುತ್ತದೆ. ಆರೋಗ್ಯ ವೃದ್ಧಿಸುತ್ತಿದೆ ಎಂದರು. ತಾಲೂಕು ಬಿಜೆಪಿ ಅಧ್ಯಕ್ಷ ಡಾ.ನವೀನ್ ಕುಮಾರ್, ಯುವ ಮೋರ್ಚಾ
ಬಾಲಾಜಿ, ಟಿ.ಆರ್.ದಯಾನಂದ್, ಹನುಮಂತರಾಜು, ಟಿ.ಸಿ. ರಮೇಶ್, ನಿಜಗುಣ, ಎಂ.ಟಿ. ಶಿವಣ್ಣ, ಕೆ.ಎಸ್. ಹರೀಶ್ ಇತರರು ಇದ್ದರು.
ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ
ಹೊಕೋಟೆ: ಪಟ್ಟಣದ ಪ್ರಮುಖ ಬೀದಿಗಳಲ್ಲಿ ದಾಖಲು ಆಂದೋಲನದ ಅಂಗವಾಗಿ ಜಿಕೆಬಿಎಂಎಸ್ ಶಾಲೆಯ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು. ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಪ್ರಕಾಶ್ ಮಾತನಾಡಿ, 6 ರಿಂದ 14 ವರ್ಷ ವಯೋವುತಿಯ ಶಾಲೆಗೆ ದಾಖಲಾಗದ ಮತ್ತು ಮಧ್ಯದಲ್ಲೇ ಶಾಲೆ ತೊರೆದ ಮಕ್ಕಳನ್ನು ಮರು ದಾಖಲಿಸುವ ಉದ್ದೇಶದಿಂದ ಜಾಥಾ ಹಮ್ಮಿಕೊಳ್ಳಲಾಗಿದೆ. ಪೋಷಕರಿಗೆ ಶಿಕ್ಷಣದ ಅವಶ್ಯಕತೆ ಬಗ್ಗೆ ತಿಳಿವಳಿಕೆ, ಸರಕಾರದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ ಶಾಲೆಗೆ ದಾಖಲಿಸಲು ಮನವೊಲಿಸಲಾಗುವುದು. ದಾಖಲಾದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರೊಂದಿಗೆ ಮುಖ್ಯವಾಹಿನಿಯಲ್ಲಿ ಕಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

