ಬೆಂಗಳೂರು ಗ್ರಾಮಾಂತರ

ಅರಣ್ಯಗಳ ಸುತ್ತ ಸೋಲಾರ್ ತಂತಿ ಅಳವಡಿಸಿ'

Published On :

ಮಾಗಡಿ: ನಾಡಿನತ್ತ ನುಗ್ಗುವ ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟಲು ಅರಣ್ಯಾಧಿಕಾರಿಗಳು ಅರಣ್ಯಗಳ ಸುತ್ತ ಸೋಲಾರ್ ತಂತಿ ಅಳವಡಿಸುವಂತೆ ಶಾಸಕ ಎಚ್.ಸಿ. ಬಾಲಕೃಷ್ಣ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು. ಅವರು ಇತ್ತೀಚಗೆ ಜೇನುಕಲ್ಲು ಪಾಳ್ಯದಲ್ಲಿ ಕಾಡು ಪ್ರಾಣಿ ಚಿರತೆ ದಾಳಿಯಿಂದ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಸರ್ಕಾರದಿಂದ ಬಿಡುಗಡೆ ಆಗಿರುವ ಪರಿಹಾರಧನ 5 ಲಕ್ಷ ರು.ಗಳ ಚೆಕ್ ಅನ್ನು ಶಾಸಕರು ವಿತರಿಸಿ ಮಾತನಾಡಿ, ಮಳೆಯಿಲ್ಲದೆ ಕಾರಣ ಕಾಡುಗಳಲ್ಲಿ ಕಾಡು ಪ್ರಾಣಿಗಳಿಗೆ ಕುಡಿಯುವ ನೀರಿಲ್ಲ, ನೀರನ್ನು ಅರಸಿಕೊಂಡು ನಾಡಿನತ್ತ ಕಾಡುಪ್ರಾಣಿಗಳು ಬರುತ್ತಿರುವುದರಿಂದ ಗ್ರಾಮೀಣ ಭಾಗದ ರೈತರಿಗೆ ತುಂಬ ತೊಂದರೆಯಾಗುತ್ತಿದ್ದು, ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಸರ್ಕಾರ ಅಗತ್ಯ ಪರಿಹಾರ ಕಂಡುಹಿಡಿಯಬೇಕಿದೆ ಎಂದರು. ಗ್ರಾಮೀಣ  ಜನತೆಯನ್ನು ಕಾಡುಪ್ರಾಣಿಗಳಿಂದ ರಕ್ಷಿಸಲು ಸಂಬಂಧಪಟ್ಟ ಅರಣ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು.ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಂ.ಕೆ. ಧನಂಜಯ, ತಾ.ಪಂ. ಅಧ್ಯಕ್ಷೆ ಅರುಂಧತಿ ಚಿಕ್ಕಣ್ಣ, ಸದಸ್ಯ ಪೊಲೀಸ್ ರಾಮಣ್ಣ, ಜಿ.ಕೃಷ್ಣ,  ಎಸ್. ಕಾಂತರಾಜ, ಇತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.