ಬೆಂಗಳೂರು ಗ್ರಾಮಾಂತರ

ಸೀಮೆ ಹಸು ಇದ್ದರೆ ರೈತರ ಬದುಕು ಬಂಗಾರ

Published On :

ಮಾಗಡಿ: ಗ್ರಾಮೀಣ ಕುಟುಂಬಕ್ಕೊಂದು ಸೀಮೆ ಹಸು ಇದ್ದರೆ ಸಾಕು, ರೈತರ ಬದುಕು ಬಂಗಾರವಾಗುತ್ತದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ  ನುಡಿದರು.  ಅವರು ತಾಲೂಕಿನ  ಸೀಗೇಕುಪ್ಪೆ ಜನತಾ ಕಾಲೊನಿಯಲ್ಲಿ  ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿ, ತಾಲೂಕಿನ ಜನ ಜಾನುವಾರುಗಳನ್ನು ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಮಹಿಳೆಯರು ಸ್ವಾವಲಂಬಿಗಳಾಗಬೇಕಾದರೆ ಸಹಕಾರ ಸಂಘದ ಕಾರ್ಯದರ್ಶಿ ರೈತರಿಗೆ ಹೆಚ್ಚೆಚ್ಚು ಹಾಲು ಉತ್ಪಾದನೆ ಮಾಡಲು ಅಗತ್ಯ ಮಾಹಿತಿ ನೀಡಬೇಕು. ಸರ್ಕಾರ ವಿವಿಧ ಜನಪರ ಯೋಜನೆಗಳನ್ನು ಸಮರ್ಪಕವಾಗಿ ರೈತರಿಗೆ ತಲುಪಿಸಬೇಕು. ಹಾಲು ಪೂರೈಕೆ ಮಾಡಿದ ರೈತರಿಗೆ ಸಕಾಲಕ್ಕೆ ಹಾಲಿನ ಹಣವನ್ನು ನೀಡಬೇಕು. ಯೋಜನೆಗಳ ಕುರಿತು ಕರಪತ್ರ ಮುದ್ರಿಸಿ ರೈತರ ಮನೆ ಮನೆಗಳಿಗೆ ತೆರಳಿ ಹಂಚಬೇಕು. ಈ ನಿಟ್ಟಿನಲ್ಲಿ  ಜನಜಾಗೃತಿಗೊಳಿಸಿ, ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿಯಾಗಬೇಕು. ಹಾಲು ಉತ್ಪಾದಕರ ಸಹಕಾರ ಸಂಘವನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯಲು ಮಹಿಳಾ ಕಾರ್ಯದರ್ಶಿ ಪಾತ್ರ ಬಹಳ ಮುಖ್ಯವಾದುದು. ಸಹಕಾರಿ ಕ್ಷೇತ್ರದಿಂದ ಮಾತ್ರ ಗ್ರಾಮಗಳ  ಪ್ರಗತಿ ಸಾಧ್ಯವಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.