ತಾವರೆಕೆರೆಯಲ್ಲಿ ನಂದಗುಡಿ ಪೊಲೀಸರ ಗ್ರಾಮ ವಾಸ್ತವ್ಯ: ಸಮಸ್ಯೆಗಳ ಅನಾವರಣ
ಸೂಲಿಬೆಲೆ: ಸ್ವಾಮಿ..ರಾತ್ರಿ ವೇಳೆ ಬೀದಿ ದೀಪವಿಲ್ಲದ ಕಾರಣ, ಕಳ್ಳರ ಕಾಟ ಜಾಸ್ತಿಯಾಗಿದೆ.ಅಲ್ಲದೇ ಅನೈತಿಕ ಚಟುವಟಿಕೆಗಳಿಗೆ ದಾರಿಯಾಗಿ ಪುಂಡರ ಹಾವಳಿ ಮಿತಿ ಮೀರಿದೆ. ಇದಕ್ಕೊಂದು ಮುಕ್ತಿ ಕಾಣಸಿ. ಜನರು ನೆಮ್ಮದಿಯಿಂದ ಇರುವಂತೆ ಪೊಲೀಸರು ಕ್ರಮ ಕೈಗೊಂಡರೆ ಉಪಕಾರವಾಗುತ್ತದೆ. ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಂದಗುಡಿ ಪೊಲೀಸರಿಂದ ಬುಧವಾರ ರಾತ್ರಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ತಮ್ಮೂರಿನಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಕಾನೂನ್ಮಕವಾಗಿ ಬಗೆಹರಿಸಿ ಅನುಕೂಲ ಮಾಡುವಂತೆ ಪೊಲೀಸ್ ಹಿರಿಯ ಅಧಿಕಾರಿಗಳ ಬಳಿ ಮನವಿ ಮಾಡಿದರು. ಇಷ್ಟು ಮಾತ್ರವಲ್ಲ, ಸಂಜೆ 7 ಗಂಟೆ ನಂತರ ತಾವರೆಕೆರೆ ಗ್ರಾಮದಿಂದ ಹಾದು ಹೋಗಿರುವ ರಾ-ಹೆದ್ದಾರಿಯಲ್ಲಿ ಸಾಗುವ ಬಸ್‌ಗಳು ತಾವರೆಕೆರ ಬಳಿ ಸ್ಟಾಪ್ ಇಲ್ಲ ಎಂದು ನಿಲ್ಲಿಸದೆ ಜನರಿಗೆ ತೊಂದರೆ ಕೊಡುತ್ತಿದ್ದಾರೆ.ಇದಕ್ಕೆ ಪರಿಹಾರ ಕೊಡಿಸಿ ಸ್ವಾಮಿ..ಇಂಥ ಹತ್ತಾರು ಸಮಸ್ಯೆಗಳನ್ನು ಗ್ರಾಮಸ್ಥರು ಪೊಲೀಸರ ಮುಂದೆ ತೆರೆದಿಟ್ಟರು.
ಇದಕ್ಕೆ ಸ್ಪಂದಿಸಿದ ನಂದಗುಡಿ ವೃತ್ತ ನಿರೀಕ್ಷಕ ತಿಮ್ಮಯ್ಯ, ಪೊಲೀಸ್ ಇಲಾಖೆ ವ್ಯಾಪ್ತಿಗೆ ಒಳಪಡುವ ಸಮಸ್ಯೆಗಳನ್ನು ಪರಿಹರಿಸಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಇತರೆ ಇಲಾಖೆಯಲ್ಲಿನ ಸಮಸ್ಯೆಗಳ ಬಗ್ಗೆ ಆಯಾ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಕಾನೂನು ಬಾಹಿರ ಚಟುವಟಿಕೆಗಳು ಕಂಡ ಬಂದರೇ ಕೂಡಲೇ ಜನರು ಪೊಲೀಸರಿಗೆ ಮಾಹಿತಿ ನೀಡಿ ಅಪರಾಧ ಕೃತ್ಯಗಳು ನಡೆಯದಂತೆ ತಡೆಯಬೇಕಾದ ಕರ್ತವ್ಯ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

