ಚಾಮುಂಡೇಶ್ವರಿ ಕರಗ ಮಹೋತ್ಸವಕ್ಕೆ ಭರದ ಸಿದ್ಧತೆ
ರಾಮನಗರ: ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ನಗರದ ಶಕ್ತಿ ದೇವತೆ ಚಾಮುಂಡೇಶ್ವರಿ ಕರಗ ಮಹೋತ್ಸವವನ್ನು ಜೆಡಿಎಸ್ ವತಿಯಿಂದ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಕೆ.ರಾಜು ತಿಳಿಸಿದರು.
ಚಾಮುಂಡೇಶ್ವರಿ ಕರಗವನ್ನು ರಾಮನಗರ ಹಬ್ಬವನ್ನಾಗಿ ಆಚರಿಸಲಾಗುತ್ತಿದೆ. ಎಲ್ಲ ಧರ್ಮದ, ಎಲ್ಲಾ ಜಾತಿಯ ಜನರು ಈ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ತಾಲೂಕಿನ ಜನತೆ ಮಾತ್ರವಲ್ಲದೆ ಅಕ್ಕಪಕ್ಕದ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚು ಮಂದಿ ಕರಗ ಮಹೋತ್ಸವದಲ್ಲಿ ಭಾಗಿಯಾಗುವರು ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ಕರಗವನ್ನು ನೋಡಲು ಬರುವ ಲಕ್ಷಾಂತರ ಮಂದಿಯ ಮನರಂಜನೆಗಾಗಿ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗದೆ. ಹೆಸರಾಂತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನೇತೃತ್ವದಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮವೂ ಒಂದಾಗಿದೆ ಎಂದರು.
ಖ್ಯಾತ ಹಿನ್ನೆಲೆ ಗಾಯಕಿಯರಾದ ಶಮಿತಾ ಮಲ್ನಾಡ್, ಚಿನ್ಮಯಿ, ಹೇಮಂತ್, ಚಿತ್ರನಟ ಯೋಗೇಶ್, ಶರಣ್, ಶ್ರೀನಗರ ಕಿಟ್ಟಿ ಮತ್ತಿತರರು ಭಾಗವಹಿಸುವರು. ಫೈರ್ ಡ್ಯಾನ್ಸ್, ರೋಬೋ ಗಣೇಶ್, ಪಾಯಿಸನ್ ತಂಡದ ನೃತ್ಯ ಸೇರಿದಂತೆ ವಿವಿಧ 22 ನೃತ್ಯಗಳು ರಸಮಂಜರಿಯ ಆಕರ್ಷಣೆ ಎಂದು ರಾಜು ಕಾರ್ಯಕ್ರಮದ ವಿವರ ನೀಡಿದರು.
ನಗರದ ಎಲ್ಲ ಬೀದಿಗಳಲ್ಲಿ ಆಕರ್ಷಕ ದೀಪಾಲಂಕಾರ ಮಾಡಲಾಗುವುದು. 10ಕ್ಕೂ ಹೆಚ್ಚು ಕಡೆಗಳಲ್ಲಿ ಬೃಹದಾಕಾರದ ಕಮಾನುಗಳನ್ನು ನಿರ್ಮಿಸಲಾಗುವುದು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಲಾಗುತ್ತಿದೆ ಎಂದು ರಾಜು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಶಾಸಕರಾದ ಬಾಲಕೃಷ್ಣ, ಜಮೀರ್ ಅಹಮದ್, ಪುಟ್ಟಣ್ಣ, ಅಫ್ಸರ್ ಆಗಾ ಸೇರಿದಂತೆ ಮತ್ತಿತರ ಜೆಡಿಎಸ್ ಮುಖಂಡರು ಪಾಲ್ಗೊಳ್ಳುವರು ಎಂದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

