ಬೆಂಗಳೂರು ಗ್ರಾಮಾಂತರ

ಡಿಸೆಂಬರ್‌ನಲ್ಲಿ ಜಾತಿಗಳ ಸಾಮಾಜಿಕ ಸಮೀಕ್ಷೆ

Published On :

ರಾಮನಗರ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಹಿಂದುಳಿದ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಡಿಸೆಂಬರ್‌ನಲ್ಲಿ ಕೈಗೊಳ್ಳಲಾಗುತ್ತಿದ್ದು, ಇದಕ್ಕೆ ಪೂರಕವಾಗಿ ಜಿಲ್ಲೆಯಲ್ಲಿ ವಿವಿಧ ಜಾತಿ, ಉಪಜಾತಿ, ಜನಾಂಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಲಾಗುವುದು ಎಂದು ಜಿಪಂ ಸಿಇಒ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ಹಿಂದಿನ ಮೀಸಲಾತಿ ಅನ್ವಯ ಜಾತಿ, ಉಪ ಜಾತಿಗಳು ಪಡೆದಿರುವ ಸೌಲಭ್ಯಗಳು, ಜನರ ಸ್ಥಿತಿಗತಿಗಳ ಮಾಹಿತಿ ಪಡೆಯಲಾಗುವುದು. ಆಯೋಗದ ಸಮೀಕ್ಷಾ ಕಾರ್ಯಕ್ಕೆ ಜಿಲ್ಲಾಧಿಕಾರಿ ಮಟ್ಟದ ಅಧಿಕಾರಿಯನ್ನು ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಜಾತಿ ಗುರುತಿಸುವಿಕೆಯನ್ನು ಅನುಬಂಧ-1ರ ಪಟ್ಟಿಯಲ್ಲಿ ಪ್ರಕಟಿದ್ದು, 1065 ಜಾತಿಗಳನ್ನು ಈ ಪಟ್ಟಿಯಲ್ಲಿ ಸೇರಿಸಿದೆ. ಬಿಟ್ಟು ಹೋಗಿರುವುದು, ತಪ್ಪುಗಳಿದ್ದಲ್ಲಿ ಅಥವಾ ಜಾತಿಗಳನ್ನು ಒಂದು ಭಾಷೆಯಿಂದ ಮತ್ತೊಂದು ಭಾಷೆಗೆ ಭಾಷಾಂತರಿಸುವ ಸಂದರ್ಭದಲ್ಲಿ ಆಗಿರಬಹುದಾದ ನ್ಯೂನತೆಗಳನ್ನು ಸರಿಪಡಿಸಲು ಸಾರ್ವಜನಿಕರು, ಜಾತಿ ಸಂಘಟನೆಗಳಿಂದ ಈ ಸಂಬಂಧ ಸೇರ್ಪಡೆ, ಮಾರ್ಪಾಡು, ಅಹವಾಲು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ವೆಂಕಟೇಶ್ ಳಿಸಿದರು.
ಹಿಂದುಳಿದ ವರ್ಗಗಳ ಜಾತಿ ಪಟ್ಟಿಯನ್ನು ನಮೂನೆ-3ರಲ್ಲಿ ಎಲ್ಲ ಜಿಲ್ಲಾಧಿಕಾರಿ ಕಚೇರಿ, ಜಿಪಂ, ತಹಸೀಲ್ದಾರ್, ತಾಪಂ ಗ್ರಾಪಂ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಯಾವುದೇ ಜಾತಿ ಬಿಟ್ಟು ಹೋಗಿರುವುದು ಅಥವಾ ಮಾರ್ಪಾಡು ಅವಶ್ಯಕತೆ ಇದ್ದಲ್ಲಿ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಚೇರಿಗೆ ಜು.18ರೊಳಗೆ ಸಲ್ಲಿಸಬಹುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.