ಏಕಾದಶಿ ಅಂಗವಾಗಿ ಗಾಳಿಪಟ ಸ್ಪರ್ಧೆ
ದೊಡ್ಡಬಳ್ಳಾಪುರ: ಇಲ್ಲಿನ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ನ ಸಾಂಸ್ಕೃತಿಕ ಸಮಿತಿಯ ನೇತೃತ್ವದಲ್ಲಿ ಏಕಾದಶಿ ಹಬ್ಬದ ಪ್ರಮುಕ್ತ 21ನೇ ವರ್ಷದ ಗಾಳಿಪಟ ಹಾರಿಸುವ ಸ್ಪರ್ಧೆ ಜು.14ರ ಸೋಮವಾರ ಮಧ್ಯಾಹ್ನ ನಡೆಯಲಿದೆ. ಮೇಘಾಂಜಲಿ ಕಲ್ಯಾಣ ಮಂದಿರದ ಸಮೀಪ ಇರುವ ಗುಂಡಪ್ಪನವರ ಬಯಲಿನಲ್ಲಿ ಸ್ಪರ್ಧೆ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ 15 ವರ್ಷದೊಳಗಿನ ಸ್ಪರ್ಧಿಗಳಿಗೆ ಸ್ಪರ್ಧೆ ನಡೆಯಲಿದೆ.ಮಧ್ಯಾಹ್ನ 2ಗಂಟೆಗೆ 15 ವರ್ಷ ಮೇಲ್ಪಟ್ಟವರಿಗೆ ಸ್ಪರ್ಧೆ ಇರುತ್ತದೆ. ಸಂಜೆ 3.30ಕ್ಕೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ನಡೆಯಲಿದೆ. ದೊಡ್ಡಬಳ್ಳಾಪುರ ನಗರ ಠಾಣೆ ಆರಕ್ಷರ ಉಪನಿರೀಕ್ಷಕ ಎಸ್.ಜಗದೀಶ್, ಡಿವೈಎಫ್ಐ ರಾಜ್ಯ ಸಮಿತಿಯ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಮಾಜಿ ನಗರಸಭಾ ಸದಸ್ಯ ಬಿ.ಜಿ.ಹೇಮಂತರಾಜು, ಡಿವೈಎಫ್ಐ ರಾಜ್ಯಮುಖಂಡ ಲಿಂಗರಾಜು, ಮಜರಾಹೊಸಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಬಿ.ವಿ.ಲೋಕೇಶ್ ಭಾಗವಹಿಸಲಿದ್ದಾರೆ.
ಮುಳ್ಳಿನ ಹಾಸಿಗೆ ಮೇಲೆ ಮಲಗಿ ಪ್ರತಿಭಟನೆ ನಾಳೆ
ದೊಡ್ಡಬಳ್ಳಾಪುರ: ಇಲ್ಲಿನ ಕನ್ನಡ ಜಾಗೃತಿ ವೇದಿಕೆ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ಮತ್ತು ಅವ್ಯವಸ್ಥೆ ಸರಿಪಡಿಸುವಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳ ವೈಫಲ್ಯ ಖಂಡಿಸಿ ಮುಳ್ಳಿನ ಹಾಸಿಗೆ ಮೇಲೆ ಮಲಗುವ ಮೂಲಕ ವಿನೂತನವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜು.14ರ ಸೋಮವಾರ ಬೆಳಗ್ಗೆ 10.30ಕ್ಕೆ ಪ್ರತಿಭಟನೆ ಆರಂಭವಾಗಲಿದ್ದು, ಜಯಚಾಮರಾಜೇಂದ್ರವೃತ್ತದಲ್ಲಿರುವ ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಧರಣಿ ನಡೆಯಲಿದೆ. 7 ವರ್ಷಗಳ ಹಿಂದೆಯೇ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದ್ದರೂ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಆಸ್ಪತ್ರೆ ಅವ್ಯವಸ್ಥೆಯ ಗೂಡಾಗಿದೆ. ಇಲ್ಲಿನ ಸಿಬ್ಬಂದಿ ಕೊರತೆ, ವೈದ್ಯರ ಕೊರತೆ, ಮೂಲಸೌಕರ್ಯಗಳ ಕೊರತೆ, ನೈರ್ಮಲ್ಯದ ಕೊರತೆ ಎದ್ದು ಕಾಣುತ್ತಿದೆ. ಪದೇ ಪದೇ ಪ್ರತಿಭಟನೆಗಳನ್ನು ನಡೆಸಿದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಗಂಭೀರ ಸ್ವರೂಪದ ಹೋರಾಟಕ್ಕೆ ಚಾಲನೆ ನೀಡಲಾಗಿದೆ. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

