ಸೇವಾದಳದ ಕಾರ್ಯಕ್ರಮ ಇನ್ನಷ್ಟು ವಿಸ್ತರಿಸಿ
ಚನ್ನಪಟ್ಟಣ: ಸೇವೆಗಾಗಿ ಬಾಳು ಎಂಬ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸೇವಾದಳದ ಕಾರ್ಯಕ್ರಮಗಳನ್ನು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ವಿಸ್ತರಿಸಲು ತಾಲೂಕು ಸೇವಾದಳದ ಪದಾಧಿಕಾರಿಗಳು ಶ್ರಮಿಸುವಂತೆ ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ಪ್ರದೀಪ್ಕುಮಾರ್ ಕರೆ ನೀಡಿದರು. ಇಲ್ಲಿನ ಮಂಗಳವಾರಪೇಟೆ ಸರ್ಕಾರಿ ಶಾಲೆಯಲ್ಲಿ ಭಾರತ ಸೇವಾದಲದ ತಾಲೂಕು ಘಟಕ ಹಮ್ಮಿಕೊಂಡಿದ್ದ ಶಿಕ್ಷಕ ಮಿಲಾಪ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸೇವಾದಳಕ್ಕೆ ತನ್ನದೇ ಆದ ಮಹತ್ವವಿದ್ದು ವಿದ್ಯಾರ್ಥಿಗಳಲ್ಲಿ ಸೇವಾಮನೋಭಾವ ವೃದ್ಧಿಸುವ ಕೆಲಸಕ್ಕೆ ಮುಂದಾಗಬೇಕೆಂದರು. ಸೇವಾದಳದ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿದ್ದೇ ಆದಲ್ಲಿ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗುವ ಜತೆಗೆ, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ. ಬಹು ಉಪಯೋಗಿಯಾಗಿರುವ ಸೇವಾದಳ ಕಾರ್ಯಕ್ರಮ ತಾಲೂಕಿನ ಎಲ್ಲಾ ಶಾಲೆಗಳಿಗೂ ದೊರೆಯುವಂತೆ ಕಾರ್ಯಕ್ರಮ ರೂಪಿಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಆರೋಗ್ಯ ಅಧೀಕ್ಷಕ ಚಿನ್ನಸ್ವಾಮಿ, ಸೇವಾದಳ ತಾಲೂಕು ಕಾರ್ಯದರ್ಶಿ ವಸಂತಕುಮಾರ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

