ಬೆಂಗಳೂರು ಗ್ರಾಮಾಂತರ

ಹೊಲ ಉತ್ತಿ, ರಾಗಿ ಬಿತ್ತಿದ ಶಾಲಾ ಮಕ್ಕಳು

Published On :

ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ನೇತೃತ್ವದಲ್ಲಿ ಹಾಡೋನಹಳ್ಳಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಕೃಷಿ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸುವ ಮತ್ತು ಕೃಷಿ ಕುರಿತಾದ ಮಾಹಿತಿ ವಿನಿಮಯ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ವಿಜ್ಞಾನ ಕೇಂದ್ರದ ಸಂಯೋಜಕ ಡಾ. ಶ್ರೀನಿವಾಸಪ್ಪ, ಭಾರತ ಕೃಷಿ ಪ್ರಧಾನ ದೇಶವೆಂದು ಗುರುತಿಸಲ್ಪಟ್ಟಿದ್ದರೂ ಇಂದಿನ ಜನಸಂಖ್ಯೆಯ ಮಿತಿಮೀರಿದ ಬೆಳವಣಿಗೆಗೆ ಪೂರಕವಾಗಿ ಆಹಾರಧಾನ್ಯಗಳ ಉತ್ಪಾದನೆಯನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತರ ದೇಶಗಳ ಮೇಲೆ ಅವಲಂಬನೆ ತಪ್ಪಿ, ಸ್ವಾವಲಂಬಿ ಬದುಕು ಕಾಣಬೇಕಾದರೆ ಭಾರತ ಕೃಷಿಯಲ್ಲಿ ಸ್ವಾವಲಂಬಿಯಾಗಬೇಕು. ಆಹಾರೋತ್ಪಾದನೆಯಲ್ಲಿ ಪ್ರಗತಿ ಸಾಧಿಸಬೇಕು. ಪ್ರಸ್ತುತ ಸಂದರ್ಭದಲ್ಲಿ ದೇಶದ ಹಿರಿಯ ತಲೆಮಾರಿಗೆ ಮಾತ್ರ ಕೃಷಿ ಎಂಬ ಮಾತು ಕೇಳಿಬರುತ್ತಿದೆ. ಇದು ಅತ್ಯಂತ ಆತಂಕಕಾರಿ ಎಂದರು.
ತಿಳಿಯಬೇಕು: ದೇಶದ ಯುವಜನತೆ, ವಿದ್ಯಾರ್ಥಿಗಳು ಕೃಷಿಯ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳಬೇಕು. ವಿದ್ಯಾವಂತ ಯುವಕರು ಕೃಷಿಯಲ್ಲಿ ತೊಡಗಿಕೊಳ್ಳಬೇಕು. ಜಾಗತೀಕರಣದ ಹೊಡೆತ, ಪರಿಸರದ ಏರುಪೇರುಗಳಿಂದಾಗಿ ನಷ್ಟದ ಉದ್ಯಮವಾಗಿರುವ ಕೃಷಿ ಲಾಭದಾಯಕವಾಗಿ ಮಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಕೃಷಿಯಿಂದ ನಾವು ವಿಮುಖರಾಗದೆ, ಗಂಭೀರ ಆಸಕ್ತಿ ಮತ್ತು ವೈಜ್ಞಾನಿಕ ಪ್ರಯೋಗಗಳ ಮೂಲಕ ಕೃಷಿಯಲ್ಲಿ ತೊಡಗಬೇಕು. ಮಕ್ಕಳಿಗೆ ಕೃಷಿ ಚಟುವಟಿಕೆಗಳ ಕುರಿತು ಮಾಹಿತಿ-ಅರಿವು ಒದಗಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಮಣ್ಣು ಪರೀಕ್ಷೆ, ಸಾವಯವ ಗೊಬ್ಬರದ ಬಳಕೆ, ಬಿತ್ತನೆ ಚಟುವಟಿಕೆ, ಉಳುಮೆ ಸೇರಿದಂತೆ ಅನೇಕ ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ನೀಡಿ, ರಾಗಿ ಬಿತ್ತನೆ ಮಾಡಿಸಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎ. ನಾಗರಾಜ್, ಘಟಕ ವ್ಯವಸ್ಥಾಪಕ ಜಗದೀಶ್, ಮಣ್ಣು ಪರೀಕ್ಷಕಿ ಡಾ.ವಾಸಂತಿ, ಮುಖ್ಯಶಿಕ್ಷಕ ಗಂಗಯ್ಯ, ಸಹಶಿಕ್ಷಕ ಮೂರ್ತಿ, ನಾಗರತ್ನ, ಸ್ಥಳೀಯ ರೈತರು ಮತ್ತು ಶಾಲಾ ಮಕ್ಕಳು ಭಾಗವಹಿಸಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.