'ಕೈ'ಗೆ ಪ್ರಬುದ್ಧತೆ ಇಲ್ಲ: ಬಚ್ಚೇಗೌಡ
ದೇವನಹಳ್ಳಿ: ತಾಲೂಕು ಭಾರತೀಯ ಜನತಾ ಪಕ್ಷ ಕಾರ್ಯಕರ್ತರ ಸಭೆ ಚನ್ನಹಳ್ಳಿ ಬಳಿಯ ಕಲ್ಯಾಣ ಮಂದಿರದಲ್ಲಿ ತಾಲೂಕು ಅಧ್ಯಕ್ಷ ರಾಜಗೋಪಾಲ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.
ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಮಾತನಾಡಿ ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಕೆಲವೇ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದು ಇದಕ್ಕೆ ಕಾರಣ ಗೌರಿಬಿದನೂರು ಮತ್ತು ಬಾಗೇಪಲ್ಲಿ ಕ್ಷೇತ್ರಗಳ ಹಲವಾರು ಗ್ರಾಮಗಳಲ್ಲಿ ಮೋದಿ ಎಂದರೆ ಯಾರೆಂದು ಗೊತ್ತಿಲ್ಲದ್ದೇಕಾರಣ ಎಂದರು.ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಪ್ರಬುದ್ಧತೆ ಇಲ್ಲ, ಸಚಿವರುಗಳಿಗೆ ಜವಾಬ್ದಾರಿ ಇಲ್ಲವಾಗಿದೆ. ಕೇವಲ ಪ್ರಚಾರದಲ್ಲಿ ತೊಡಗಿದ್ದಾರೆ ಎಂದರು. ತಾವು ಚುನಾವಣೆಯಲ್ಲಿ ಪರಾಭವಗೊಂಡಿದ್ದಕ್ಕೆ ಮತದಾರರು ನಿರಾಶೆಯಾಗಬೇಕಿಲ್ಲ. ಮುಂದಿನ ಎಲ್ಲ ಹಂತದ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತಾಗಬೇಕು ಮತ್ತು ಯುವಕರಿಗೆ ಆದ್ಯತೆ ನೀಡಬೇಕು ಎಂದು ಬಚ್ಚೇಗೌಡ ತಿಳಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂತರಾಜು ಮಾತನಾಡಿ ಬಿಜೆಪಿ ಪ್ರತಿಯೊಬ್ಬ ಕಾರ್ಯಕರ್ತರು ತಮ್ಮದೇ ಆದ ಜವಾಬ್ದಾರಿ ಹೊಂದಿರುತ್ತಾರೆ. ಪಕ್ಷ ಒಂದು ಮರ ಇದ್ದ ಹಾಗೆ ಎಂದರು.
ಜೆಡಿಎಸ್ ಮುಳುಗುತ್ತಿರುವ ಹಡಗಾಗಿದೆ. ಯಾವಾಗ ಬೇಕಾದರೂ ಕಾಂಗ್ರೆಸ್ಗೆ ಕೇವಲ ಅಧಿಕಾರದಾಹಿ ಪಕ್ಷ ಎಂದರು.
ಎಲ್ಲರೂ ಪಕ್ಷಕ್ಕಾಗಿ ದುಡಿದು ಯಾವುದೇ ಚುನಾವಣೆ ಬಂದರೂ ಯಶಸ್ಸು ಗಳಿಸಬೇಕು ಎಂದು ಕಾರ್ಯಕತೆರಿಗೆ ಕರೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಭಾರಿಗಳಾದ ಸಚ್ಚಿದಾನಂದಮೂರ್ತಿ, ಮಾಜಿ ಶಾಸಕ ಜಿ.ಚಂದ್ರಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ. ರಾಜಣ್ಣ, ರಾಜ್ಯ ಪರಿಷತ್ ಸದಸ್ಯ ಎ.ಸಿ.ಗುರುಸ್ವಾಮಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆಗೊಂಡರು. ಹೊಸಕೋಟೆ ತಾಲೂಕಿನ ಬಿಜೆಪಿ ಮುಖಂಡ ಬಿ.ಎನ್. ಗೋಪಾಲಗೌಡ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ನಾಗರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ನಾಗೇಶ್, ರಾಜ್ಯ ಪರಿಷತ್ ಸದಸ್ಯ ದೇ.ಸೂ. ನಾಗರಾಜ್, ಮಹಿಳಾ ಘಟಕದ ಭಾಗ್ಯ ರಮೇಶ್, ನಗರ ಅಧ್ಯಕ್ಷ ಎಸ್. ರಮೇಶ್ ಉಪಸ್ಥಿತರಿದ್ದರು.
ಅಸಮರ್ಪಕ ವಿದ್ಯುತ್ ಸರಬರಾಜಿನಿಂದ ರೈತರಿಗೆ ತೊಂದರೆಯಾಗುತ್ತಿರುವುದರಿಂದ ಆ.4 ರಂದು ಬೆಸ್ಕಾಂ ಕಚೇರಿ ಬಳಿ ಪ್ರತಿಭಟನೆ ಹಮ್ಮಿಕೊಲ್ಳಾಗುವುದು ಎಂದು ತಾಲೂಕು ಕಾರ್ಯದರ್ಶಿ ನಾರಾಯಣಸ್ವಾಮಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

