ಕನ್ನಡಿಗರಿಗೆ ಕಿರುಕುಳ: ಗೋವಾ ಸರ್ಕಾರದ ವಿರುದ್ಧ ಪ್ರತಿಭಟನೆ
ದೊಡ್ಡಬಳ್ಳಾಪುರ: ಕನ್ನಡಿಗ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಮೂಲಕ ಗೋವಾ ಸರ್ಕಾರ ಉದ್ಧಟತನ ತೋರುತ್ತಿದೆ. ಕನಿಷ್ಠ ಮಾನವೀಯತೆಯನ್ನೂ ಪ್ರದರ್ಶಿಸದೆ ಮನೆಗಳನ್ನು ಕೆಡವಿಹಾಕಿರುವ ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ದಬ್ಬಾಳಿಕೆ ಮಾಡುತ್ತಿದೆ ಎಂದು ಕರವೇ ಆರೋಪಿಸಿದೆ.
ಗೋವಾದ ಬೈನಾ ಬೀಚ್‌ನಲ್ಲಿ ಕನ್ನಡಿಗರಿಗೆ ಕಿರುಕುಳ ನೀಡುತ್ತಿರುವ ಗೋವಾ ಸರ್ಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಇಲ್ಲಿನ ಸಿದ್ಧಲಿಂಗಯ್ಯ ವೃತ್ತದಲ್ಲಿ ಗುರುವಾರ ಸಂಜೆ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ರಾಜಘಟ್ಟ ರವಿ, ಕಾರ್ಯಾಧ್ಯಕ್ಷ ರವಿ ಮಾವಿನಕುಂಟೆ, ಪ್ರಕಾಶ್ ಮತ್ತಿತರರು, ಗೋವಾ ಸರ್ಕಾರದ ಉದ್ಧಟತನ ನೋಡಿಯೂ ನೋಡದಂತೆ ಸುಮ್ಮನಿರುವ ಕರ್ನಾಟಕ ಸರ್ಕಾರದ ಧೋರಣೆ ಕೂಡ ಖಂಡನಾರ್ಹ.
ಈ ಹಿಂದೆ ಕೂಡ 2004ರಲ್ಲಿ ಬೈನಾ ಬೀಚ್‌ನಲ್ಲಿ ಕನ್ನಡಿಗರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಗೋವಾ ಮಾಡಿತ್ತು. ಈಗ ಮತ್ತೆ ಯಾವುದೇ ಮುನ್ಸೂಚನೆ ನೀಡದೆ ನಿರಾಶ್ರಿತರನ್ನಾಗಿಸಿದೆ. ಜೊತೆಗೆ ಚಳಿ-ಮಳೆಯೆನ್ನದೆ ಬೀದಿಗೆ ದಬ್ಬುವ ಮೂಲಕ ಅಮಾನವೀಯವಾಗಿ ನಡೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೇ ಗೋವಾ ಸರ್ಕಾರ ಸಂತ್ರಸ್ತ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸಬೇಕು. ತನ್ನ ತಪ್ಪು ವರ್ತನೆಗೆ ಬೇಷರತ್ ಕ್ಷಮೆಯಾಚಿಸಬೇಕು. ತಪ್ಪಿದಲ್ಲಿ ಕರವೇ ವ್ಯಾಪಕ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಕರವೇ ತಾಲೂಕು ಪದಾಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

