ದೊಡ್ಡಬಳ್ಳಾಪುರದಲ್ಲಿ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಶಿಬಿರ
ದೊಡ್ಡಬಳ್ಳಾಪುರ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ನೇತೃತ್ವದಲ್ಲಿ 27ನೇ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ಗಳ ಜಾಂಬೋರೇಟ್ ಶಿಬಿರ ದೊಡ್ಡಬಳ್ಳಾಪುರದ ವಿಖ್ಯಾತ ಬೆಸೆಂಟ್ ಪಾರ್ಕ್ನಲ್ಲಿ ನಡೆಯಲಿದೆ. ಈ ಕುರಿತು ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಪೂರ್ವಸಿದ್ಧತಾ ಸಭೆ ಶಾಸಕ ಟಿ. ವೆಂಕಟರಮಣಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಶಾಸಕ ವೆಂಕಟರಮಣಯ್ಯ, ರಾಜ್ಯದ ಎಲ್ಲ 30 ಜಿಲ್ಲೆಗಳ ಸುಮಾರು 4500 ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಬೇಕಾಗುವ ಸಾಮಗ್ರಿಗಳು, ಆಯೋಜನೆಗೆ ಸಹಕಾರ ಕೋರಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರೂ ಒಟ್ಟುಗೂಡಿ ಸಹಕರಿಸಿ ಯಶಸ್ವಿಯಾಗಿ ಶಿಬಿರ ನಡೆಯುವಂತೆ ಆಯೋಜಿಸಬೇಕಿದೆ. ಮೂಲಸೌಕರ್ಯಗಳು, ನೀರು ಇತ್ಯಾದಿ ವ್ಯವಸ್ಥೆಗಳಿಗೂ ಆದ್ಯತೆ ನೀಡುವಂತೆ ಅವರು ಸಲಹೆ ನೀಡಿದರು.
ಶಿಬಿರದಲ್ಲಿ ಹೊರಸಂಚಾರ, ಸಮುದಾಯ ಅಭಿವೃದ್ಧಿ ಸೇವೆ, ಸಾಹಸಮಯ ಚಟುವಟಿಕೆಗಳು, ಸಿಲ್ಕ್-ಓ-ರಾಮ್, ಕ್ವಿಜ್, ಯುವವೇದಿಕೆ, ಹಿಮಾಲಯ ವೃಕ್ಷ ಮಣಿದಾರಕರ ಸಭೆ, ತರಬೇತುದಾರರ ಸಭೆ, ಕಿರುನಾಟಕಗಳು, ಶಿಬಿರಾಗ್ನಿ, ಜಿಲ್ಲಾ ಸಂದರ್ಶನ ಮತ್ತು ಸಾಂಸ್ಕೃತಿಕ ಪ್ರದರ್ಶನ ಸೇರಿದಂತೆ ಹಲವು ಚಟುವಟಿಕೆಗಳು ಆಯೋಜನೆಗೊಳ್ಳಲಿವೆ. ಈ ಬಗೆಯ ಶಿಬಿರಗಳಿಂದ ವಿದ್ಯಾರ್ಥಿಗಳ ಪರಿಪೂರ್ಣ ಪ್ರತಿಭೆಯ ಅನಾವರಣ ಸಾಧ್ಯವಾಗಲಿದೆ. ತಾಲೂಕಿನ ವಿದ್ಯಾರ್ಥಿಗಳೂ ಈ ಶಿಬಿರದಲ್ಲಿ ಪಾಲ್ಗೊಂಡು ಸದುಪಯೋಗಪಡೆಯಬಹುದಾಗಿದೆ ಎಂದರು.
ಶಿಬಿರ 7 ದಿನಗಳ ಕಾಲ ಆಗಸ್ಟ್ 17ರಿಂದ 23ರವರೆಗೆ ನಡೆಯಲಿದೆ. ಶಿಬಿರ ಆಯೋಜನಾ ಸಮಿತಿಯನ್ನು ಸಹ ಇದೇ ಸಂದರ್ಭದಲ್ಲಿ ವಿವಿಧ ಇಲಾಖಾ ಅಧಿಕಾರಿಗಳನ್ನು ಒಳಗೊಂಡಂತೆ ರಚಿಸಲಾಯಿತು. ಜಿ.ಪಂ ಉಪಾಧ್ಯಕ್ಷ ಎನ್.ಹನುಮಂತೇಗೌಡ, ತಾಪಂ ಪ್ರಭಾರ ಅಧ್ಯಕ್ಷೆ ರಮಾದೇವಿ, ಸದಸ್ಯ ಕೆ.ಮುನಿಯಪ್ಪ, ಸ್ಕೌಟ್-ಗೈಡ್ಸ್ ಅಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

