ಚನ್ನಪಟ್ಟಣ ತಾಪಂ ಅಧ್ಯಕ್ಷೆ ಜೆಡಿಎಸ್ನ ಸವಿತಾ
ಚನ್ನಪಟ್ಟಣ: ತಾ.ಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ನ ಸವಿತಾ ಅಧ್ಯಕ್ಷರಾಗಿ, ಬಿಜೆಪಿಯ ಪವಿತ್ರ ಉಪಾಧ್ಯಕ್ಷೆಯಾಗಿ ಅವಿರೋಧ ಆಯ್ಕೆಗೊಂಡರು.
ಮೂರನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. ಚುನಾವಣೆಯಲ್ಲಿ ಇವರಿಬ್ಬರನ್ನು ಹೊರತು ಪಡಿಸಿ ಉಳಿದವರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪವಿಭಾಗಾಧಿಕಾರಿ ಸಿದ್ದಪ್ಪ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.
19 ಮಂದಿ ಸದಸ್ಯ ಬಲದ ತಾ.ಪಂ ನಲ್ಲಿ ಜೆಡಿಎಸ್ನಿಂದ 15 ಮಂದಿ, ಬಿಜೆಪಿಯಿಂದ ನಾಲ್ಕು ಮಂದಿ ಸದಸ್ಯರು ಆಯ್ಕೆ ಗೊಂಡಿದ್ದಾರೆ. ಚುನಾವಣೆಯ ವೇಳೆ ಜೆಡಿಎಸ್ನ ನಾಲ್ಕು ಮಂದಿ ಸದಸ್ಯರು ಗೈರಾಗಿದ್ದರು.
ಅಭಿನಂದನೆ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕಟಗೊಳ್ಳುತ್ತಿದ್ದಂತೆ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ವಿತರಿಸಿದ ಸಂಭ್ರಮಿಸಿದರು. ಜೆಡಿಎಸ್ನ ಕೆಲ ಕಾರ್ಯಕರ್ತರು, ಹಾಗೂ ತಾ.ಪಂ ಸದಸ್ಯರು ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದಿಸಿದರು.
ಕುಡಿಯುವ ನೀರಿಗೆ ಒತ್ತು: ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸವಿತಾ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ತಲೆ ದೋರಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಜತೆಗೆ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಪಕ್ಷದ ಎಲ್ಲಾ ಸದಸ್ಯರ ಒಮ್ಮತದ ಮೇರೆಗೆ ನಾನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಗೊಂಡಿದ್ದು, ಸಭೆಗೆ ನಮ್ಮ ಪಕ್ಷದ ಕೆಲ ಸದಸ್ಯರು ಕಾರಣಾಂತರಗಳಿಂದ ಗೈರಾಗಿದ್ದು ಅವರು ದೂರವಾಣಿ ಮೂಲಕ ಮಾತನಾಡಿದ್ದಾರೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ಜೆಡಿಎಸ್: ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಉಪಾಧ್ಯಕ್ಷೆ ಪವಿತ್ರಾ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ನಾನು ಜೆಡಿಎಸ್ನೊಂದಿಗೆ ಗುರುತಿಸಿ ಕೊಂಡಿದ್ದೇನೆ. ತಾಂತ್ರಿಕವಾಗಿ ಬಿಜೆಪಿಯಲ್ಲಿದ್ದೇನಾದರೂ ನಾನು ಮಾನಸಿಕವಾಗಿ ಜೆಡಿಎಸ್ನಲ್ಲಿದ್ದು ನನ್ನ ಪಕ್ಷ ಜೆಡಿಎಸ್ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಜಯರಂಗ, ಜಿ.ಪಂ ಸದಸ್ಯ ರಘುಕುಮಾರ್, ಸದಸ್ಯರಾದ ಕೆ.ಪಿ.ಕಾಂತರಾಜು, ಗುರುಕುಮಾರ್, ಚಿನ್ನಗಿರೀಗೌಡ, ಭಾನುಪ್ರಸಾದ್, ಬಿ.ಜಿ.ರಮೇಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

