31 ವಾರ್ಡ್ಗಳಲ್ಲಿ ಉದ್ಯಾನವನ ನಿರ್ಮಾಣ
ಚನ್ನಪಟ್ಟಣ: ಪಟ್ಟಣದ 31 ವಾರ್ಡ್ಗಳಲ್ಲಿ ಕಿರು ಉದ್ಯಾನವನ ನಿರ್ಮಾಣ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಶಾಸಕ ಸಿ.ಪಿ. ಯೋಗೇಶ್ವರ್ ತಿಳಿಸಿದರು.
ಪಟ್ಟಣದ ಚಿಕ್ಕಮಳೂರು ಗ್ರಾಮದಲ್ಲಿ ಉದ್ಯಾನವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಪಟ್ಟಣದ ನಾಗರೀಕರ ಬಹುದಿನದ ಬೇಡಿಕೆಯಾಗಿರುವ ಉದ್ಯಾನವನ ನಿರ್ಮಾಣ ಕಾರ್ಯ ಕೈಗೆತ್ತುಕೊಂಡಿದ್ದು ಮೊದಲ ಹಂತವಾಗಿ 10 ಉದ್ಯಾನವನಗಳನ್ನು ನಿರ್ಮಾಣ ಮಾಡುವುದಾಗಿ ಪ್ರಕಟಿಸಿದರು. ಈ ಉದ್ಯಾನವನಕ್ಕೆ ಶಾಸಕರ ಅನುಧಾನದಿಂದ 10 ಲಕ್ಷ ರು. ಹಣ ಬಿಡುಗಡೆ ಮಾಡಿದ್ದು, ಇದರ ಜತೆಗೆ ರಾಜ ಕೆಂಪೇಗೌಡ ಬಡಾವಣೆ ಮತ್ತು ಸಿಎಂಸಿ ಲೇಔಟ್ನಲ್ಲಿ ಉದ್ಯಾನ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಪಟ್ಟಣದ ವ್ಯಾಪ್ತಿಯಲ್ಲಿ ಉದ್ಯಾನವನ ನಿರ್ಮಾಣಕ್ಕೆ ಅಗತ್ಯವಿರುವ ಸರ್ಕಾರಿ ಜಾಗ ಹುಡುಕಲು ಅಧಿಕಾರಿಗಳಿಗೆ ಸೂಚಿಸಿದ್ದು ಸ್ಥಳ ಸಿಕ್ಕರೆ ಉದ್ಯಾನ ನಿರ್ಮಾಣ ಮಾಡುವುದಾಗಿ ತಿಳಿಸಿದರು.
ನಗರಾಭಿವೃದ್ಧಿಗೆ 20 ಕೋಟಿ: ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗಾಗಿ 20 ಕೋಟಿ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದು, ಪಟ್ಟಣದಾದ್ಯಂತ ಹೊಸದಾಗಿ ಪೈಪ್ಲೃನ್ ನಿರ್ಮಾಣ, ಕುಡಿಯುವ ನೀರಿನ ಮೂಲ ಸೌಕರ್ಯಕ್ಕಾಗಿ 10 ಕೋಟಿ, ರಸ್ತೆ ಅಭಿವೃದ್ಧಿಗೆ 5 ಕೋಟಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಲೊನಿಗಳ ಮೂಲ ಸೌಕರ್ಯಕ್ಕಾಗಿ 5 ಕೋಟಿ ರು. ಅನುದಾನ ಬಿಡುಗಡೆ ಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು. ಪಟ್ಟಣದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳು ನಡೆಯಬೇಕಿದೆ. ಇದಕ್ಕಾಗಿ 30 ಕೋಟಿ ರು. ಹೆಚ್ಚುವರಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿ ಕೆಲಸ ಮಾಡುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

