ಬೆಂಗಳೂರು ಗ್ರಾಮಾಂತರ

ಶಿಕ್ಷಕನಿಗೆ ನ್ಯಾಯಾಂಗ ಬಂಧನ

Published On :

ಆನೇಕಲ್ಲು: ಸಬ್‌ಮಂಗಲ  ಸರ್ಕಾರಿ ಶಾಲೆಯ ಹಿಂದಿ ಶಿಕ್ಷಕ ಶಿವಲಿಂಗಯ್ಯನಿಗೆ ಬೆಂಗಳೂರು ನಗರ ಸೆಷನ್ಸ್ ಜಡ್ಜ್ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ಹೊರಡಿಸಿದ್ದಾರೆ.
ಗುರುವಾರ ಬೆಳಗ್ಗೆ ಶಿವಲಿಂಗಯ್ಯ ವಿದ್ಯಾರ್ಥಿನಿಯೊಬ್ಬರನ್ನು ಅಸಭ್ಯ ಭಾಷೆಯಿಂದ ನಿಂದಿಸಿದ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾರಣ ಪೋಷಕರು ಹಾಗೂ ಗ್ರಾಮಸ್ಥರು ಶಾಲಾ ಆವರಣದಲ್ಲಿ ಥಳಿಸಿದ್ದರು. ಆನೇಕಲ್ ಪಿಎಸ್‌ಐ ಅನಂತರಾಂ ಮತ್ತು ಸಿಬ್ಬಂದಿ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಕೇಸು ದಾಖಲಿಸಿದ್ದರು.
 ಶುಕ್ರವಾರ ಬೆಳಗ್ಗೆ ಡೈವೈಎಸ್ಪಿ ಬಲರಾಮೇಗೌಡ ಮತ್ತು ಸಿಪಿಐ  ರಾಜೇಂದ್ರ ಮಾಗದರ್ಶನದಲ್ಲಿ ನ್ಯಾಯಾಲಯಕ್ಕೆ ಕರೆದೊಯ್ಯಲಾಗಿತ್ತು. ವಿಚಾರಣೆ ಆಲಿಸಿದ ನ್ಯಾಯಾಧೀಶರು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ತಾಲೂಕಿನ ಹೊಸರಸ್ತೆಯಲ್ಲಿರುವ ಪರಪ್ಪನ ಅಗ್ರಹಾರದ ಜೈಲಿಗೆ ಕರೆತರಲಾಗಿದೆ  ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.