ಎಂಇಎಸ್ ಪುಂಡಾಟಿಕೆ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ
ರಾಮನಗರ: ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸುತ್ತಿರುವ ಪುಂಡಾಟಿಕೆಯನ್ನು ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.
ನಗರದ ಐಜೂರು ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ವಿರುದ್ಧ ಘೋಷಣೆಗಳನ್ನು ಕೂಗಿ, ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಹೈಕೋರ್ಟ್ ಆದೇಶದಂತೆ ಬೆಳಗಾವಿಯ ಯಳ್ಳೂರಿನಲ್ಲಿ ಅಳವಡಿಸಿದ್ದ ಮರಾಠಿ ನಾಮಫಲಕವನ್ನು ತೆರವುಗೊಳಿಸಿದ್ದರೂ, ಎಂಇಎಸ್ ಕಾರ್ಯಕರ್ತರು ಮತ್ತೆ ಅದೇ ಸ್ಥಳದಲ್ಲಿ ನಾಮಫಲಕವನ್ನು ನಿರ್ಮಿಸುವ ಮೂಲಕ ಹೈಕೋರ್ಟ್ ಆದೇಶವನ್ನು ಗಾಳಿಗೆ ತೂರಿದ್ದಾರೆ. ಆದರೂ ಕೂಡ ಜಿಲ್ಲಾಡಳಿತ ಅವರ ವಿರುದ್ಧ ಕ್ರಮಕ್ಕೆ ಮುಂದಾಗದಿರುವುದು ಖಂಡನೀಯ ಎಂದರು.
ಮಹರಾಷ್ಟ್ರದಿಂದ ಆಗಮಿಸಿರುವ ಕಿಡಿಗೇಡಿಗಳು ಕರ್ನಾಟಕದ ಗಡಿ ಗ್ರಾಮಗಳು ಮಹಾರಾಷ್ಟ್ರಕ್ಕೆ ಸೇರಿವೆ ಎಂದು ಅಲ್ಲಿ ನಾಮಫಲಕಗಳನ್ನು ನಿರ್ಮಿಸಲು ಮುಂದಾಗಿವೆ. ಕನ್ನಡಿಗರು, ಪೊಲೀಸರು ಹಾಗೂ ಕೆಲ ಮಾಧ್ಯಮ ಪ್ರತಿನಿಧಿಗಳ ಮೇಲೆ ಕಲ್ಲು ತೂರಾಟ ನಡೆಸಿ ಗಾಯಗೊಳಿಸಿದ್ದಾರೆ ಎಂದು ಹರಿಹಾಯ್ದರು.
ಎಂಇಎಸ್ ಇಷ್ಟೆಲ್ಲಾ ಪುಂಡಾಟಿಕೆ ನಡೆಸುತ್ತಿದ್ದರೂ ಕೂಡ ಅವರ ವಿರುದ್ಧ ರಾಜ್ಯದ ಜನಪ್ರತಿನಿಧಿಗಳು ಮೃದು ಧೋರಣೆ ತಳೆದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಪುಂಡಾಟಿಕೆ ನಡೆಸುತ್ತಿರುವ ಎಂಇಎಸ್ ಕಾರ್ಯಕರ್ತರನ್ನು ಬಂಧಿಸಿ, ಅವರ ವಿರುದ್ಧ ಗೂಂಡಾ ಕಾಯ್ದೆಯನ್ವಯ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಕಾರ್ಯಕರ್ತರು ಸರ್ಕಾರವನ್ನು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

