ಬೆಂಗಳೂರು ಗ್ರಾಮಾಂತರ

ಅಧಿವೇಶನ ನಂತರ ಕ್ಷೇತ್ರಾದ್ಯಂತ ಪ್ರವಾಸ

Published On :

ರಾಮನಗರ : ಲೋಕಸಭೆ ಅಧಿವೇಶನ ಮುಗಿದ ನಂತರ ಕ್ಷೇತ್ರದಾದ್ಯಂತ ಪ್ರವಾಸ ಕೈಗೊಂಡು ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
ಬಜೆಟ್ ಅಧಿವೇಶನದಲ್ಲಿ ಭಾಗವಹಿಸಬೇಕಾಗಿರುವುದರಿಂದ ಕ್ಷೇತ್ರ ಪ್ರವಾಸ ನಡೆಸಲು ಸಾಧ್ಯವಾಗಿಲ್ಲ. ಆದರೆ, ನಾನು ಸುಮ್ಮನೆ ಕುಳಿತಿಲ್ಲ. ಈಗಾಗಲೇ ಚಾಲ್ತಿಯಲ್ಲಿರುವ ಯೋಜನೆಗಳ ಅನುಷ್ಠಾನದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಡನೆ ಸತತ ಸಂಪರ್ಕದಲ್ಲಿರುವುದಾಗಿ ಜಿ.ಪಂ.ನ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
ನೀರಿನ ಸಮಸ್ಯೆ ಬಗೆಹರಿಸಲು ಯತ್ನ: ಜಿಲ್ಲೆಯನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಯೋಜನೆ ರೂಪಿಸಲಾಗಿದೆ. ಮಾಗಡಿಯ ಶ್ರೀರಂಗ ಯೋಜನೆಗೆ ಟೆಂಡರ್ ಪ್ರಕ್ರಿಯೆ ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ನಂತರ ತಕ್ಷಣವೇ ಕಾಮಗಾರಿ ಆರಂಭವಾಗಲಿದೆ. ಜಿಲ್ಲೆಯಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ನೀರಾವರಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುವುದಾಗಿ ತಿಳಿಸಿದರು.
ರಾಜಕೀಯಕ್ಕೆ ಅವಕಾಶವಿಲ್ಲ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಆಗಬೇಕಿರುವ ಯೋಜನೆಗಳ ಬಗ್ಗೆ ಈಗಾಗಲೇ ವಿವಿಧ ಇಲಾಖೆಗಳ ಸಚಿವರ ಬಳಿ ಪ್ರಸ್ತಾವಣೆ ಸಲ್ಲಿಸಲಾಗಿದ್ದು, ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಮನಗರಕ್ಕೆ ಹೆಚ್ಚುವರಿ ರೈಲು ಓಡಿಸಲು ಒಪ್ಪಿಗೆ ಸೂಚಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ರಾಜಕೀಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಸುರೇಶ್ ಹೇಳಿದರು.   
ಚುಕ್ಕಾಣಿ: ಅಭಿವೃದ್ಧಿ ಉದ್ದೇಶದಲ್ಲಿ ಜಿಲ್ಲಾ ಪಂಚಾಯಿತಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದೇವೆ. ಆಡಳಿತಕ್ಕೆ ಚುರುಕು ಮುಟ್ಟಿಸಿ, ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.