ಎಂಇಎಸ್ ನಿಷೇಧಕ್ಕೆ ಒತ್ತಾಯ
ದೊಡ್ಡಬಳ್ಳಾಪುರ: ಕರ್ನಾಟಕದ ಗಡಿಭಾಗದಲ್ಲಿ ಪದೇ ಪದೆ ಖ್ಯಾತೆ ತೆಗೆಯುತ್ತಿರುವ ಮತ್ತು ಭಾಷಾ ಸೌಹಾರ್ದತೆ, ಸಾಮರಸ್ಯ ಹಾಳು ಮಾಡುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಭಾನುವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 207ರ ಡಿ ಕ್ರಾಸ್ ವೃತ್ತದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ರಾಜ್ಯದ ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ಮಹಾರಾಷ್ಟ್ರ ರಾಜ್ಯ ಎಂದು ಬರೆದಿದ್ದ ನಾಮಫಲಕ ತೆರವುಗೊಳಿಸಿರುವ ಹಿನ್ನಲೆಯಲ್ಲಿ ಮರಾಠಿ ಪುಂಡರು ನಡೆಸುತ್ತಿರುವ ಪುಂಡಾಟಿಕೆ ಖಂಡನಾರ್ಹ. ಕೂಡಲೇ ಉದ್ಧಟತನ ನಿಲ್ಲಿಸದಿದ್ದರೆ ಎಂಇಎಸ್ ವಿರುದ್ಧ ರಾಜ್ಯವ್ಯಾಪಿ ಬೃಹತ್ ಹೋರಾಟ ರೂಪಿಸಬೇಕಾದೀತು ಎಚ್ಚರಿಕೆ ನೀಡಿದರು.
ಯಳ್ಳೂರು ಕರ್ನಾಟಕದ ಭಾಗ. ಇಲ್ಲಿದ್ದ ಅನಧಿಕೃತ ನಾಮಫಲಕ ತೆರವುಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಆ ಮೂಲಕ ಬೆಳಗಾವಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಅದನ್ನು ವಿರೋಧಿಸಿ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ನೇತೃತ್ವದಲ್ಲಿ ನಡೆಯುತ್ತಿರುವ ಗೂಂಡಾಗಿರಿಗೆ ತಕ್ಕ ಪ್ರತ್ಯುತ್ತರ ನೀಡಲು ಕನ್ನಡಪರ ಸಂಘಟನೆಗಳಿಗೂ ಗೊತ್ತಿದೆ. ಆದರೆ ಒಕ್ಕೂಟ ವ್ಯವಸ್ಥೆಯಲ್ಲಿ ಶಾಂತಿಕದಡುವ ಕೆಲಸ ಆಗಬಾರದು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಸಂಭಾಜಿಯನ್ನು ಗಡೀಪಾರು ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ರಾಜಘಟ್ಟ ರವಿ ಸೇರಿದಂತೆ ದೊಡ್ಡಬಳ್ಳಾಪುರ ತಾಲೂಕು ಘಟಕ, ಹಮಾಮ್, ಸೊಣ್ಣಮಾರನಹಳ್ಳಿ, ರಾಜಘಟ್ಟ ಸೇರಿದಂತೆ ಹಲವು ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

