ಬೆಂಗಳೂರು ಗ್ರಾಮಾಂತರ

ಅವಕಾಶ ಸದುಪಯೋಗ ಚಿಂತನೆ ಅಗತ್ಯ

Published On :

ದೊಡ್ಡಬಳ್ಳಾಪುರ: ಸಾಧನೆ ಸಾಧಕನ ಸ್ವತ್ತೇ ಹೊರತು, ಸೋಮಾರಿಯ ಸ್ವತ್ತಲ್ಲ. ಶೈಕ್ಷಣಿಕವಾಗಿ ಇಂದು ಅನೇಕ ಅವಕಾಶಗಳಿದ್ದು ಪರಿಪೂರ್ಣ ಮಾಹಿತಿಯೊಂದಿಗೆ ಲಭ್ಯ ಅವಕಾಶಗಳನ್ನು ಬಳಸಿಕೊಳ್ಳುವ ಚಿಂತನೆ ವಿದ್ಯಾರ್ಥಿಗಳಲ್ಲಿ ಬರಬೇಕು ಎಂದು ಬಿಎಂಟಿಸಿ ಭದ್ರತಾ ಮತ್ತು ಜಾಗೃತಿ ವಿಭಾಗದ ನಿರ್ದೇಶಕ ಡಾ.ಜಿ.ರಮೇಶ್ ಹೇಳಿದರು.
ಇಲ್ಲಿನ ಪಿಸಿವಿ ಚಾರಿಟಬಲ್ ಟ್ರಸ್ಟ್ ನೇತೃತ್ವದಲ್ಲಿ ದೇವಾಂಗ ಮಂಡಲಿ ಕಲ್ಯಾಣ ಮಂದಿರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ನಿರಂತರ ಪರಿಶ್ರಮ ಮತ್ತು ವಿಭಿನ್ನ ಆರೋಗ್ಯಕರ ಚಿಂತನೆಗಳು ಮನುಷ್ಯನನ್ನು ಪರಿಪೂರ್ಣನನ್ನಾಗಿಸುತ್ತವೆ. ಕನಸುಗಳನ್ನು ಸಾಕಾರಗೊಳಿಸಿಕೊಳ್ಳುವ ಸಾಧನೆ ಎಲ್ಲರ ಆದ್ಯತೆಯಾಗಿರಬೇಕು. ಮಹತ್ತನ್ನೇ ಯೋಚಿಸಬೇಕು. ಆಗ ಮಾತ್ರ ಸಣ್ಣ ಪ್ರಮಾಣದ ಸಾಧನೆಯಾದರೂ ಕೈಗೆಟುಕುತ್ತದೆ. ಪರಿಶ್ರಮದ ಬದುಕು ಯಾವಾಗಲೂ ಉತ್ತಮವಾದ ಭವಿಷ್ಯವನ್ನೇ ಕೊಡುತ್ತದೆ. ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವೈವಿಧ್ಯಮಯ ಆಯ್ಕೆಗಳ ಸಾಧ್ಯಾಸಾಧ್ಯತೆಯನ್ನು ಅರಿತುಕೊಳ್ಳಬೇಕು. ಆ ಮೂಲಕ ಸಾಮಾಜಿಕ ಕ್ಷೇತ್ರದಲ್ಲೂ ಗುರುತಿಸಿಕೊಳ್ಳುವಂತಾಗಬೇಕು. ಶೈಕ್ಷಣಿಕ ಸಾಧನೆ ನಿಂತ ನೀರಾಗಬಾರದು. ನಿರಂತರತೆಯನ್ನು ಕಾಯ್ದುಕೊಳ್ಳಬೇಕು ಎಂದರು.
ಸಾನಿಧ್ಯ ವಹಿಸಿದ್ದ ಪುಷ್ಪಾಂಡಜಮುನಿ ಆಶ್ರಮದ ಶ್ರೀದಿವ್ಯಜ್ಞಾನಾನಂದಸ್ವಾಮೀಜಿ ಮಾತನಾಡಿ, ಸಮುದಾಯದ ಅಭ್ಯುದಯಕ್ಕೆ ಶೈಕ್ಷಣಿಕ ಮುನ್ನಡೆಯೊಂದೇ ದಾರಿದೀಪ. ಈ ಹಿನ್ನೆಲೆಯಲ್ಲಿ ಪ್ರತಿಭಾವಂತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಇತರರ ಪ್ರತಿಭಾ ಪ್ರಚೋದನೆಗೆ ಅವಕಾಶ ಕೊಡುವ ಕೆಲಸ ಆಗಬೇಕು. ಇಂದು ಸಮಾಜದ ವಿಭಿನ್ನ ಕ್ಷೇತ್ರಗಲ್ಲಿ ಸಮುದಾಯದ ಉನ್ನತ ಪ್ರತಿಭೆಗಳು ಕಾಣಿಸಿಕೊಳ್ಳುತ್ತಿರುವುದು ಗಣನೀಯ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಮುನ್ನಡೆಯನ್ನು ಗುರಿಯಾಗಿಸಿಕೊಂಡು ಪರಿಪೂರ್ಣ ವ್ಯಕ್ತಿತ್ವವನ್ನು ಕಂಡುಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳ ಪ್ರತಿಭೆ, ಆಸಕ್ತಿಗಳಿಗೆ ಒತ್ತಾಸೆ ನೀಡುವ ಮೂಲಕ ಅವರ ಬೆಳವಣಿಗೆಯನ್ನು ಪ್ರೋತ್ಸಾಹಿಸಬೇಕು ಎಂದರು.
 ಟ್ರಸ್ಟ್‌ನ ಅಧ್ಯಕ್ಷ ಪಿ.ಸಿ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಎಸ್.ಭಾವನ, ದೇವಾಂಗ ಮಂಡಲಿ ಅಧ್ಯಕ್ಷ ಎಂ.ಜಿ. ಶ್ರೀನಿವಾಸ್, ವಾಣಿಜ್ಯೋದ್ಯಮಿ ಎಚ್.ಪಿ.ಶಂಕರ್, ನಗರಸಭಾ ಸದಸ್ಯ ಪಿ.ಸಿ.ಲಕ್ಷ್ಮೀನಾರಾಯಣ್, ಟ್ರಸ್ಟ್ ಖಜಾಂಚಿ ಪುಷ್ಪಲತಾ, ಕಾರ್ಯದರ್ಶಿ ಪ್ರಶಾಂತ್ ಮತ್ತಿತರರು  ಹಾಜರಿದ್ದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.