ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ
ರಾಮನಗರ: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಯತ್ನ ನಡೆದಿರುವ ಪ್ರಕರಣ ಬುಧವಾರ ನಗರದಲ್ಲಿ ಸಂಭವಿಸಿದೆ.
ನಗರದ ಆದಿಶಕ್ತಿಪುರ ಬಡಾವಣೆಯ 6 ವರ್ಷದ ಬಾಲಕಿಯನ್ನು ಅದೇ ಬಡಾವಣೆಯ ಕಾಳಿಕಾರಾಜ್ ಎಂಬ ಕಾಮುಕ ಸಪೋಟ ಹಣ್ಣು ಕೊಡಿಸುವ ನೆಪದಲ್ಲಿ ಮನೆಯ ಹಿಂಭಾಗಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಮಧ್ಯಾಹ್ನ ಮನೆಯ ಮುಂದೆ ತನ್ನ ಸಹೋದರನೊಂದಿಗೆ ಆಟವಾಡುತ್ತಿದ್ದ ಬಾಲಕಿಯನ್ನು ಆರೋಪಿ ಕಾಳಿಕಾರಾಜ್ ಪುಸಲಾಯಿಸಿ ಕರೆದೊಯ್ದಿದ್ದಾನೆ. ಈ ಸಂದರ್ಭದಲ್ಲಿ ಸಹೋದರ ನಾನೂ ಬರುವೆನೆಂದು ಹಠ ಹಿಡಿದಾಗ, ಬಾಲಕನನ್ನು ಬೆದರಿಸಿ ಕಳುಹಿಸಿದ್ದಾನೆ. ಬಳಿಕ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ.
ಬಾಲಕ ಈ ವಿಷಯವನ್ನು ತನ್ನ ಪೋಷಕರಿಗೆ ತಿಳಿಸಿದ್ದಾನೆ. ಪೋಷಕರು ಹುಡುಕಾಟ ನಡೆಸುತ್ತಿದ್ದ ವೇಳೆ ಬಾಲಕಿಯು ಅಳುತ್ತಾ ಬರುತ್ತಿದ್ದುದನ್ನು ಕಂಡು ವಿಚಾರಿಸಿದಾಗ ಅತ್ಯಾಚಾರ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಪೋಷಕರು ಕೂಡಲೇ ಐಜೂರು ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ತಕ್ಷಣವೇ ಕಾರ್ಯಪ್ರವಣತ್ತರಾದ ಪೊಲೀಸರು ಆರೋಪಿ ಕಾಳಿಕಾರಾಜ್ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅತ್ಯಾಚಾರ ನಡೆದಿದೆಯೋ, ಇಲ್ಲವೋ ಎಂಬುದು ವೈದ್ಯಕೀಯ ಪರೀಕ್ಷೆ ನಂತರವಷ್ಟೇ ದೃಢಪಡಬೇಕಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

