ಪರಿಸರ ನಾಶದಿಂದ ಗಂಡಾಂತರ

Updated on: 

ಸೂಲಿಬೆಲೆ: ನಗರೀಕರಣ ಬೆಳೆಯುತ್ತಿದಂತೆ ಪರಿಸರ ನಾಶ ಹೆಚ್ಚಾಗುತ್ತಿದ್ದು, ಇದರಿಂದ ಮುಂದಿನ ಪೀಳಿಗೆಯ ಮನಕುಲಕ್ಕೆ ದೊಡ್ಡ ಗಂಡಾಂತರ ಕಾದಿದೆ ಎಂದು ಪ್ರಾಂಶುಪಾಲ ಚಂದ್ರಶೇಖರ್ ಹೇಳಿದ್ದಾರೆ.
 ಸೂಲಿಬೆಲೆ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕಾಲೇಜಿನ ಯೋಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆವತಿಯಿಂದ ಹಮ್ಮಿಕೊಂಡಿದ್ದ ಪರಿಸರ ದಿನಾಚರಣಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಹಿರಿಯ ಉಪಾನ್ಯಾಸಕ ಹನುಮಂತರಾಯಪ್ಪ ಮಾತನಾಡಿ, ಪರಿಸರ ನಾಶದಿಂದ ಪ್ರಕೃತಿಯಲ್ಲಿ ಅಸಮತೋಲನ ಉಂಟಾಗುತ್ತಿದ್ದು, ಅಂತರ್ಜಲ ವರ್ಷದಿಂದ ವರ್ಷಕ್ಕೆ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿದೆ. ಇದಕ್ಕೆ ಪರಿಸರ ನಾಶವೇ ಕಾರಣ. ಪ್ರತಿಯೊಬ್ಬ ವಿದ್ಯಾರ್ಥಿ ಒಂದೊಂದು ಗಿಡವನ್ನು ದತ್ತು ಪಡೆದು ಪರಿಸರವನ್ನು ಬೆಳೆಸಬೇಕು ಎಂದರು. ರಿಷಿಕುಲ್ ವಿದ್ಯಾಪೀಠದ ಸಂಸ್ಥಾಪಕ ದೇವರಾಜ್ ಮಾತನಾಡಿ, ಪರಿಸರ ಸಂರಕ್ಷಣಿ ನಮ್ಮೆಲ್ಲರ ಹೊಣಿಯಾಗಬೇಕು. ಪರಿಸರದ ಜೋತೆ ಭಾವನಾತ್ಮಕ ಸಂಬಂಧವನ್ನು ಹೊಂದಬೇಕು ಎಂದರು.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಅಧಿಕಾರಿಗಳಾದ ಅನಿಲ್ಕುಮಾರ್, ವಿಜಯಕುಮಾರ್, ಉಪನ್ಯಾಸಕ ನಾಗರಾಜ್ ಮಾತನಾಡಿದರು.ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪರಿಸರದ ಬಗ್ಗೆ ಜಾಗೃತಿಯನ್ನು ಮೂಡಿಸುವ ಭಿತ್ತಿ ಪತ್ರಗಳನ್ನು ಹಿಡಿದು ಜಾಥಾ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com