ಬೆಂಗಳೂರು ಗ್ರಾಮಾಂತರ

ತಂಬಾಕು ಮುಕ್ತ ಸಮಾಜ ನಿರ್ಮಾಣ ಸಂಕಲ್ಪ

Published On :

ದೊಡ್ಡಬಳ್ಳಾಪುರ: ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಇಲ್ಲಿನ ಬಿರ್ಲಾ ಸೂಪರ್ ಬಲ್ಕ್ ಟರ್ಮಿನಲ್, ಶ್ರೀರಾಮ ಆಸ್ಪತ್ರೆ ಮತ್ತು ಲಾವಣ್ಯ ವಿದ್ಯಾ ಸಂಸ್ಥೆಯ ಸಹಯೋಗದಲ್ಲಿ ತಂಬಾಕು ವಿರೋಧಿ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ಲಾವಣ್ಯ ಶಾಲೆಯ ವಿದ್ಯಾರ್ಥಿಗಳು ಸಾರ್ವಜನಿಕರೊಡಗೂಡಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಬೀದಿ ಬೀದಿಗಳಲ್ಲಿ ಜನರನ್ನು ಭೇಟಿ ಮಾಡಿ ಅರಿವು ಮೂಡಿಸುವ ಕೆಲಸ ಮಾಡಿದರು.
ತಂಬಾಕು ಮುಕ್ತ ಸಮಾಜ ನಿರ್ಮಿಸುವ ಸಂಕಲ್ಪ ಮಾಡಲಾಯಿತು. ನಂತರ ಲಾವಣ್ಯ ಶಿಕ್ಷಕರ ತರಬೇತಿ ಕಾಲೇಜು ಸಭಾಂಗಣದಲ್ಲಿ ತಂಬಾಕು ಉತ್ಪನ್ನಗಳಿಂದ ಆರೋಗ್ಯದ ಮೇಲಾಗುವ ಪರಿಣಾಮ ಕುರಿತು ಪ್ರಾತಕ್ಷಿಕೆ ಉಪನ್ಯಾಸ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯಿತಿ ಸದಸ್ಯ ಡಾ.ಎಚ್.ಜಿ.ವಿಜಯಕುಮಾರ್, ಸರ್ಕಾರಕ್ಕೆ ತಂಬಾಕು ಉತ್ಪನ್ನಗಳಿಂದ ಎಷ್ಟು ಲಾಭವಿದೆಯೋ ಅದಕ್ಕೆ ಎರಡು ಪಟ್ಟು ಹಣವನ್ನು ತಂಬಾಕು ವ್ಯಸನಿಗಳು ತಮ್ಮ ಆರೋಗ್ಯದ ರಕ್ಷಣೆಗೆ ಸುರಿಯುತ್ತಿರುವುದು ಆತಂಕದ ವಿಚಾರವಾಗಿದೆ. ದೇಶದಲ್ಲಿ ತಂಬಾಕು ವ್ಯಸನಿಗಳು ಶೇ.30ರಿಂದ 50ರಷ್ಟು ಸಿಗುತ್ತಾರೆ. ತಂಬಾಕು ಸೇವನೆ ಹೆಚ್ಚಾಗಿ ಯುವಕರಿಂದಲೇ ಆರಂಭವಾಗುತ್ತದೆ. ಈ ಹಂತದಲ್ಲಿ ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕಿದೆ.  ಇದು ವ್ಯಸನ. ಒಮ್ಮೆ ಚಟಕ್ಕೆ ಬಿದ್ದರೆ ದೂರಾಗುವುದು ಕಷ್ಟಸಾಧ್ಯ ಎಂಬ ಎಚ್ಚರಿಕೆ ಹೊಂದಿರಬೇಕು ಎಂದರು.
ಶಿಕ್ಷಕರು ಶಾಲೆಗಳಲ್ಲಿ ಕಾಲೇಜುಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಮಹತ್ವದ ಕೆಲಸ ಮಾಡಬೇಕು.
ತಂಬಾಕು ಸೇವನೆಯಿಂದ ಕ್ಯಾನ್ಸರ್ ಮಾತ್ರವಲ್ಲದೆ ದೇಹದ ಪ್ರತಿಯೊಂದು ಅಂಗಗಳಿಗೂ ರೋಗ ತಗುಲುವ ಆತಂಕವಿದೆ. ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ದಿನನಿತ್ಯ ಕಾಡುವ ರೋಗಗಳು ಉಲ್ಪಣಗೊಳ್ಳಲೂ  ಇದು ಕಾರಣವಾಗುತ್ತದೆ ಎಂದು ವಿವರಿಸಿದರು.
 ಬಿರ್ಲಾ ಸೂಪರ್ ಬಲ್ಕ್ ಟರ್ಮಿನಲ್ ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ರಾಜೇಂದ್ರ ಸಂಗ್ರಾಮ್,
ವ್ಯವಸ್ಥಾಪಕ ಮಂಜುನಾಥ್, ಲಾವಣ್ಯ ವಿದ್ಯಾ ಸಂಸ್ಥೆಯ ನಿರ್ದೇಶಕ ವಿಶ್ವಾಸ್, ಶಾಲಾ ಸಿಬ್ಬಂದಿವರ್ಗ, ಪ್ರೌಢಶಾಲೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.