ರೇಷ್ಮೆ ಮಾರುಕಟ್ಟೆಗೆ ಶಾಸಕರ ದಿಢೀರ್ ಭೇಟಿ
ವಿಜಯಪುರ: ಪಟ್ಟಣದಲ್ಲಿ ಕೋಟ್ಯಂತರ ರು.ಗಳ ವ್ಯವಹಾರ ನಡೆಯುವಂತಹ ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಸಾಕಷ್ಟು ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣಿಸುತ್ತಿರುವುದನ್ನು ಗಮನಿಸಿದ ಶಾಸಕ ಪಿಳ್ಳಮುನಿಶಾಮಪ್ಪ ಮಾರುಕಟ್ಟೆಯ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.
ಅವರು ಪಟ್ಟಣದ ರೇಷ್ಮೆ ಮಾರುಕಟ್ಟೆಗೆ ಭೇಟಿ ನೀಡಿದ ಸಮಯದಲ್ಲಿ ರಿಲರ್ಸ್ ಹಾಗೂ ರೈತರ ಸಮಸ್ಯೆಗಳನ್ನು ಆಲಿಸಿದರು. ಮಾರುಕಟ್ಟೆಯಲ್ಲಿ ಅಲ್ಲಲ್ಲಿ ಕೊಳೆತು ನಾರುವ ಕಸ, ಎಲ್ಲೆಂದರಲ್ಲಿ ಉಗುಳಿರುವುದು, ಶುಚಿತ್ವವಿಲ್ಲದ ಕುಡಿಯುವ ನೀರಿನ ವ್ಯವಸ್ಥೆ, ಅದೇ ರೀತಿ ಶುಚಿತ್ವ ಕಾಣದ ಶೌಚಾಲಯಗಳನ್ನು ಗಮನಿಸಿದ ಶಾಸಕರು ಅಧಿಕಾರಿಗಳ ಹಾಜರಾತಿ ಪಟ್ಟಿ ಹಾಗೂ ಬೇಜವಾಬ್ದಾರಿಯಲ್ಲಿ ನಡೆಯುತ್ತಿರುವ ಕಾರ್ಯ ವೈಖರಿಯನ್ನು ಗಮನಿಸಿದರು. ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು. ಇದೇ ಸಂಧರ್ಭದಲ್ಲಿ ಮಾರುಕಟ್ಟೆ ಹಿರಿಯ ಅಧಿಕಾರಿ ಶಾಸಕರೊಂದಿಗೆ ದೂರವಾಣಿ ಸಂಪರ್ಕದಲ್ಲಿ ಮಾತನಾಡಿ ಇನ್ನು ಮೂರು ದಿನಗಳಲ್ಲಿ ಮಾರುಕಟ್ಟೆಯ ಎಲ್ಲಾ ಸಮಸ್ಯೆಗಳ ಬಗ್ಗೆ ಗಮನಹರಿಸಿ ಬಗೆಹರಿಸುವುದಾಗಿ ತಿಳಿಸಿದರು. ಬಮೂಲ್ ನಾರಾಯಣಸ್ವಾಮಿ, ಪುರಸಭಾ ಮುಖ್ಯಾಧಿಕಾರಿ ಮಾರುತಿ ಶಂಕರ್, ವೀರಭದ್ರಪ್ಪ, ಪುರಸಭಾ ಸದಸ್ಯ ಕೇಶವಪ್ಪ, ಜೆಡಿಎಸ್ ಮುಖಂಡರು ಮಾರುಕಟ್ಟೆಯ ಅಧಿಕಾರಿಗಳು ರೈತರು, ರೀಲರ್ಸ್ಗಳು ಸಾರ್ವಜನಿಕರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

