ಹೊಸ ಉದ್ಯಮ ಸ್ಥಾಪಿಸಲು ಆರ್ಥಿಕ ನೆರವು
ರಾಮನಗರ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರು ಹೊಸ ಉದ್ಯಮ ಸ್ಥಾಪಿಸಲು ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಬ್ಯಾಂಕುಗಳ ಮೂಲಕ ಆರ್ಥಿಕ ನೆರವು ಕಲ್ಪಿಸಲಾಗುವುದು.
ಈ ಯೋಜನೆಯಡಿ ಸ್ವಯಂ ಉದ್ಯೋಗ ಪ್ರಾರಂಭಿಸಲಿಚ್ಛಿಸುವ 18 ವರ್ಷ ಮೇಲ್ಪಟ್ಟ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿ ಅಥವಾ ರಾಮನಗರದ ಕೈಗಾರಿಕಾ ವಸಾಹತು ಪ್ರದೇಶದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ಜೂ.30 ರೊಳಗೆ ಸಂಬಂಧಿಸಿದ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವ್ಯಕ್ತಿ ಅಥವಾ ಕುಟುಂಬದ ಸದಸ್ಯರು ಈಗಾಗಲೇ ಪಿಎಂಇಜಿಪಿ, ಪಿಎಂಆರ್ವೈ, ಆರ್ಇಜಿಪಿ ಯೋಜನೆಗಳಡಿ ಸಹಾಯಧನ, ಅಂಚಿನ ಹಣವನ್ನು ಪಡೆದಿದ್ದರೆ ಅಥವಾ ಕೇಂದ್ರ, ರಾಜ್ಯ ಸರ್ಕಾರದ ಯಾವುದೇ ಯೋಜನೆಯಲ್ಲಿ ಸಹಾಯಧನ ಪಡೆದಿದ್ದರೆ ಅಂತಹ ವ್ಯಕ್ತಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ. ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ರಾಮನಗರ ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಎಲ್. ಬಾಲ್ಯಾನಾಯಕ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

