ಬೆಂಗಳೂರು ಗ್ರಾಮಾಂತರ

ಕರವೇ ಪದಾಧಿಕಾರಿಗಳ ಪದಗ್ರಹಣ

Published On :

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕನ್ನಡಪರ ಹೋರಾಟಗಳು ಮತ್ತು ಚಳವಳಿಗಳು ಪ್ರಭಾವಿಯಾಗಿ ಆಡಳಿತಶಾಹಿ ಮೇಲೆ ಒತ್ತಡ ಹೇರುವ ಸಾಮರ್ಥ್ಯ ಗಳಿಸಬೇಕು. ಜನಪರವಾದ ಹಿತಾಸಕ್ತಿಗಳನ್ನು ಯಾವತ್ತೂ ಮರೆಯಬಾರದು ಎಂದು ಕರವೇ ರಾಜ್ಯ ಉಪಾಧ್ಯಕ್ಷ ಎಂ. ಶಿವರಾಜ್‌ಗೌಡ ಹೇಳಿದರು.
ಇಲ್ಲಿನ ಲಯನ್ಸ್ ಭವನದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸಂಘಟನೆಯ ತಾಲೂಕು ಅಧ್ಯಕ್ಷರಾಗಿ ರಾಜಘಟ್ಟರವಿ, ಕಾರ್ಯಾಧ್ಯಕ್ಷರಾಗಿ ರವಿ ಮಾವಿನಕುಂಟೆ, ಉಪಾಧ್ಯಕ್ಷರಾಗಿ ರಾಜಘಟ್ಟ ಮಹೇಶ್, ಎಸ್‌ಎಲ್‌ಎನ್ ವೇಣು, ಪ್ರಧಾನ ಕಾರ್ಯದರ್ಶಿಯಾಗಿ ಹಮಾಮ್ ಪ್ರಕಾಶ್, ಕಾರ್ಯದರ್ಶಿಯಾಗಿ ಎನ್.ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿಯಾಗಿ ನವೀನ್ ಹಮಾಮ್, ಖಜಾಂಚಿಯಾಗಿ ಆನಂದಕುಮಾರ್, ತೂಬಗೆರೆ ಹೋಬಳಿ ಅಧ್ಯಕ್ಷರಾಗಿ ಮುನಿಆಂಜನಪ್ಪ ಅವರನ್ನು ಘೋಷಣೆ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.