ಬೆಂಗಳೂರು ಗ್ರಾಮಾಂತರ

ರಾಜೀವ್ ಚೈತನ್ಯ ಯೋಜನೆ

Published On :

ರಾಮನಗರ: ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ-ಯುವತಿಯರು ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಸರ್ಕಾರವು ರಾಜೀವ್‌ಗಾಂಧಿ ಚೈತನ್ಯ ಯೋಜನೆ ಜಾರಿಗೆ ತರಲಾಗಿದೆ ಎಂದು ಜಿಪಂ ಸಿಇಒ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ಗ್ರಾಮೀಣ ಭಾಗದ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ-ಯುವತಿಯರಿಗೆ ವೃತ್ತಿಪರ ಕೌಶಲ್ಯ ಹಾಗೂ ಸ್ವಯಂ ಉದ್ಯೋಗ ಸ್ಥಾಪಿಸುವ ತರಬೇತಿ ನೀಡಲಾಗುವುದು. ತರಬೇತಿ ಪಡೆದ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಪ್ರಾರಂಭಿಸುವ ಜತೆಗೆ ಇತರರನ್ನೂ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. ಜಿಲ್ಲೆಯಲ್ಲಿರುವ 130 ಗ್ರಾಪಂ ನಿಂದ ಪ್ರತಿ ಗ್ರಾಪಂನಲ್ಲಿ 40ರಂತೆ ಒಟ್ಟು 5200 ಮಂದಿ ಗುರುತಿಸಲಾಗಿದ್ದು, ಈ ಪೈಕಿ ಪ್ರಥಮ ಹಂತದಲ್ಲಿ 3641 ಮಂದಿ ಸ್ಯಾಟ್‌ಕಾಂ ತರಬೇತಿ ಪಡೆದುಕೊಂಡಿದ್ದಾರೆ. ಇವರಿಗೆ ದ್ವಿತೀಯ ಹಂತದಲ್ಲಿ ಸ್ವ ಉದ್ಯೋಗ ಮತ್ತು ವೃತ್ತಿಪರ ಕೌಶಲ್ಯ ತರಬೇತಿ ನೀಡಲು ಸರ್ಕಾರ ಯೋಜನಾ ಬೆಂಬಲ ಸಂಸ್ಥೆಗಳನ್ನು ಗುರುತಿಸಿದೆ ಎಂದರು.  ಬಿಡದಿಯ ಎಡಿಪೈ ಸಂಸ್ಥೆ, ಹಾರೋಹಳ್ಳಿಯ ಕೈಗಾರಿಕಾ ತರಬೇತಿ ಸಂಸ್ಥೆ, ಬೆಂಗಳೂರಿನ ಎಂ.ಎಸ್.ರಾಮಯ್ಯ ಸಿಟಿ ಸಂಸ್ಥೆಗಳು ವೃತ್ತಿಪರ ಕೌಶಲ್ಯ ತರಬೇತಿ ನೀಡಲಿವೆ. ತರಬೇತಿ ನಂತರ ಅಭ್ಯರ್ಥಿಗಳು ಸ್ವಉದ್ಯಮ ಸ್ಥಾಪಿಸಲು ಬ್ಯಾಂಕ್ ಮೂಲಕ ಸಾಲ ಪಡೆಯಲು ಇದೇ ಸಂಸ್ಥೆಗಳು ಸಹಕಾರ ನೀಡಲಿವೆ ಎಂದರು.  ಕೃಷಿ, ಹೈನುಗಾರಿಕೆ, ಕುರಿಸಾಕಣೆ, ಜೇನು ಸಾಕಣೆ, ಪುಷ್ಪೋದ್ಯಮ, ನರ್ಸರಿ ಸೇರಿದಂತೆ ಒಟ್ಟು 49 ವಿಷಯಗಳ ಪೈಕಿ ಆಸಕ್ತ ವಿಷಯದಲ್ಲಿ ತರಬೇತಿ ಪಡೆದುಕೊಳ್ಳಬಹುದು. ನಂತರ ಉದ್ಯಮ ಸ್ಥಾಪಿಸಲು ಬ್ಯಾಂಕುಗಳ ಮೂಲಕ ಸಾಲ ಪಡೆಯುವ ವೇಳೆಯಲ್ಲೂ ಸಹಕಾರ ನೀಡಲಾಗುವುದು ಎಂದರು. ಜಿ.ಪಂ ಯೋಜನಾ ನಿರ್ದೇಶಕ ಬಸವರಾಜಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.